Ukraine ವಿರುದ್ಧ ರಷ್ಯಾದ ಅಣ್ವಸ್ತ್ರ ದಾಳಿ ತಡೆದಿದ್ದ ಪ್ರಧಾನಿ ಮೋದಿ!
Team Udayavani, Mar 11, 2024, 6:41 AM IST
ಹೊಸದಿಲ್ಲಿ: ಉಕ್ರೇನ್ ವಿರುದ್ಧ ರಷ್ಯಾ ಅಣ್ವಸ್ತ್ರ ಬಳಕೆಗೆ ಮುಂದಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂಭಾವ್ಯ ಅಣು ಬಾಂಬ್ ದಾಳಿ ನಡೆಯ ದಂತೆ ನೋಡಿಕೊಂಡರು ಎಂದು ಅಮೆರಿಕದ ಸಿಎನ್‌ಎನ್ ಟಿವಿ ವರದಿ ಮಾಡಿದೆ. “ಮೋದಿ ಅವರ ಮಧ್ಯಸ್ಥಿಕೆ ಮತ್ತು ಇತರ ದೇಶಗಳ ನಾಯಕರು ಈ ದಾಳಿ ನಡೆಯ ದಂತೆ ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದರು’ ಎಂದು ಅಮೆರಿಕದ ಇಬ್ಬರು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಲಾಗಿದೆ.
ರಷ್ಯಾ ಅಣ್ವಸ್ತ್ರಗಳನ್ನು ಬಳಸಬಹುದು ಎಂದು ಅಮೆರಿಕ ಜೋ ಬೈಡೆನ್ ಆಡಳಿತವು ಆತಂಕಕ್ಕೀಡಾಗಿತ್ತು ಎಂದೂ ತಿಳಿಸಲಾಗಿದೆ.
ಭಾರತದ ಪ್ರಧಾನಿ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಪ್ರಯತ್ನ ಮತ್ತು ಸಾರ್ವಜನಿಕ ಹೇಳಿಕೆಗಳು ಬಿಕ್ಕಟ್ಟು ಉಂಟಾಗದಂತೆ ನೋಡಿ ಕೊಳ್ಳುವಲ್ಲಿ ಕಾರಣವಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೂಂದೆಡೆ ಉಕ್ರೇನ್ ಅಣು ಬಾಂಬ್ ಬಳಸಲಿದೆ ಎಂದು ರಷ್ಯಾದಲ್ಲಿ ಸುಳ್ಳು ಸುದ್ದಿಯನ್ನು ಪಸರಿಸಲಾಯಿತು. ಇದನ್ನೇ ಅಣ್ವಸ್ತ್ರ ಬಳಕೆಗೆ ಅಸ್ತ್ರ ಮಾಡಿಕೊಳ್ಳುವ ಹುನ್ನಾರವಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಯುದ್ಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಎಂದೂ ನೇರವಾಗಿ ರಷ್ಯಾವನ್ನು ಟೀಕಿಸಿಲ್ಲ. ಆದರೆ ಇದು ಯುದ್ಧಗಳ ಕಾಲವಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.