ಜನಕಲ್ಯಾಣದಿಂದ ಜಗ ಕಲ್ಯಾಣ : ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಭಾಷಣ


Team Udayavani, Sep 27, 2019, 7:56 PM IST

Narendra-Modi—UNGM-726

ನ್ಯೂಯಾರ್ಕ್: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ 74ನೇ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಡತನ ನಿರ್ಮೂಲನೆ, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ, ಜಾಗತಿಕ ತಾಪಮಾನ ನಿಯಂತ್ರಣ ಮತ್ತು ಭಯೋತ್ಪಾದನೆ ಸೇರಿದಂತೆ ಹಲವಾರು ವಿಷಯಗಳ ಮೇಲೆ ಮಾತನಾಡಿದ ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ರಾಷ್ಟ್ರನಾಯಕರ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿದರು.

ಹಿಂದಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ‘ಜನ ಕಲ್ಯಾಣದಿಂದ ಜಗತ್ತಿನ ಕಲ್ಯಾಣ’ ನಮ್ಮ ಧ್ಯೇಯವಾಗಿದೆ ಎಂದು ಹೇಳಿದರಲ್ಲದೆ ಜಗತ್ತಿಗೆ ‘ಯುದ್ಧದ ಬದಲು ಬುದ್ಧನನ್ನು ಕೊಟ್ಟ ದೇಶ’ ನಮ್ಮದು ಎಂದು ಭಯೋತ್ಪಾದನೆಯ ವಿರುದ್ಧದ ಭಾರತ ನಿಲುವನ್ನು ವಿಶ್ವವೇದಿಕೆಯಲ್ಲಿ ಬಲವಾಗಿ ಪ್ರತಿಪಾದಿಸಿದರು.

‘ನಮಸ್ಕಾರ’ ಎಂದು ಹೇಳುವ ಮೂಲಕ ತನ್ನ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ ಅವರು 74ನೇ ವರ್ಷದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾರತದ 130 ಕೋಟಿ ಪ್ರಜೆಗಳ ಪರವಾಗಿ ಮಾತನಾಡುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಈ ವರ್ಷ ವಿಶ್ವದಲ್ಲೇ ಅತೀ ದೊಡ್ಡ ಲೋಕತಂತ್ರದ ಚುನಾವಣೆಯೊಂದು ನಡೆದು ಆ ಚುನಾವಣೆಯಲ್ಲಿ ಅತೀ ಹೆಚ್ಚು ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ನನ್ನನ್ನು ಮತ್ತು ನನ್ನ ಸರಕಾರವನ್ನು ಹಿಂದಿಗಿಂತಲೂ ಹೆಚ್ಚು ಬಹುಮತದಿಂದ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ನಾನು ಇವತ್ತು ಇಲ್ಲಿ ನಿಮ್ಮ ಮುಂದೆ ನಿಂತು ಮಾತನಾಡಲು ಸಾಧ್ಯವಾಗಿದೆ ಎಂದು ಮೋದಿ ಹೇಳಿದರು.

ಜಗತ್ತಿನಾದ್ಯಂತ ಈ ವರ್ಷ ಮಹಾತ್ಮಾ ಗಾಂಧಿ ಅವರ 150ನೇ ಜಯಂತಿಯನ್ನು ಆಚರಿಸುತ್ತಿದೆ. ಸತ್ಯ ಮತ್ತು ಅಹಿಂಸೆಯ ಮಾರ್ಗದಲ್ಲಿ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗ ಅಶಾಂತಿಯಿಂದ ಕಂಗೆಟ್ಟಿರುವ ಇಂದಿನ ಜಗತ್ತಿಗೆ ಆದರ್ಶಪ್ರಾಯವಾಗಿದೆ ಎಂದು ಮೋದಿ ಅವರು ತಮ್ಮ ಭಾಷಣದಲ್ಲಿ ಅಭಿಪ್ರಾಯಪಟ್ಟರು.

ನಾನು ಇಲ್ಲಿಗೆ ಬರುತ್ತಿರಬೇಕಾದರೆ ವಿಶ್ವಸಂಸ್ಥೆಯ ಗೋಡೆಗಳ ಮೇಲೆ ‘ಪ್ಲಾಸ್ಟಿಕ್ ಬಳಕೆ ನಿಷೇಧಿಸಿ’ ಎಂದು ಬರೆದಿರುವುದನ್ನು ಕಂಡೆ. ನಮ್ಮ ದೇಶದಲ್ಲಿ ಒಮ್ಮೆಗೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ಅನ್ನು ನಿಷೇಧಿಸುವ ನಿಟ್ಟಿನಲ್ಲಿ ಬಹುದೊಡ್ಡ ಅಭಿಯಾನವೊಂದು ನಡೆಯುತ್ತಿದೆ ಎಂಬುದನ್ನು ನಾನಿಲ್ಲಿ ನಿಮ್ಮ ಗಮನಕ್ಕೆ ತರಲು ಸಂತೋಷಪಡುತ್ತೇನೆ ಎಂದು ಮೋದಿ ಹೇಳಿದರು.

ಮಾತ್ರವಲ್ಲದೇ ಮುಂದಿನ ಐದು ವರ್ಷಗಳಲ್ಲಿ ಭಾರತವು ‘ಕ್ಷಯ ರೋಗ ಮುಕ್ತವಾಗಲಿದೆ’. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಪದವೇ ನಮಗೆ ಸ್ಪೂರ್ತಿಯಾಗಿದೆ. ಮತ್ತಿದು ಕೇವಲ ಭಾರತಕ್ಕೆ ಮಾತ್ರವೇ ಸೀಮಿತವಾಗಿಲ್ಲ ಹಾಗೂ ಕೇವಲ ತೋರಿಕೆಗಾಗಿ ನಾವು ಕಠಿಣ ಪರಿಶ್ರಮ ಪಡುತ್ತಿಲ್ಲ ಎಂದೂ ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಭಾರತವು ಇಂದು ವಿಶ್ವಕ್ಕೇ ಒಂದು ಸ್ಪೂರ್ತಿಯಾಗಿದೆ ಎಂದು ಮೋದಿ ಅವರು ತಮ್ಮ ಭಾಷಣದಲ್ಲಿ ಪ್ರತಿಪಾದಿಸಿದರು. ಅಭಿವೃದ್ಧಿಶೀಲ ರಾಷ್ಟ್ರವೊಂದು ದೇಶವ್ಯಾಪಿ ಬೃಹತ್ ಸ್ವಚ್ಛತಾ ಅಭಿಯಾನವೊಂದನ್ನು ಯಶಸ್ವಿಯಾಗಿ ನಡೆಸುತ್ತದೆ ಎಂದಾದರೆ ಹಾಗೂ ಕೇವಲ ಐದು ವರ್ಷಗಳಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಬಲ್ಲದು ಎಂದಾದರೆ ಈ ವ್ಯವಸ್ಥೆಯು ಇಡೀ ವಿಶ್ವಕ್ಕೇ ಒಂದು ಸ್ಪೂರ್ತಿಯ ವಿಷಯವಾಗಿದೆ ಎಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಇನ್ನು ತನ್ನ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಜಾಗತಿಕ ತಾಪಮಾನದ ವಿಚಾರವನ್ನು ಪ್ರಸ್ತಾಪಿಸಲು ಮರೆಯಲಿಲ್ಲ. ಜಾಗತಿಕ ತಾಪಮಾನದ ಕಾರಣದಿಂದಾಗಿ ಇಂದು ವಿಶ್ವದ ಹಲವು ಕಡೆಗಳಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ ಎಂದು ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. ಹಾಗೂ ‘ಪರಿಸರ ರಕ್ಷಿಸಿ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮೋದಿ ಅವರು ವಿಶ್ವಕ್ಕೇ ಕರೆ ನೀಡಿದರು. ಜಾಗತಿಕ ತಾಪಮಾನಕ್ಕೆ ಕಡಿಮೆ ಕೊಡುಗೆ ನೀಡುತ್ತಿರುವ ದೇಶ ಭಾರತವಾಗಿದೆ ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುತ್ತಿರುವ ರಾಷ್ಟ್ರವೂ ಭಾರತವಾಗಿದೆ ಎಂದು ಮೋದಿ ಅವರು ವಿಶ್ವಸಂಸ್ಥೆಯ ವೇದಿಕೆಯಲ್ಲಿ ಪ್ರತಿಪಾದಿಸಿದರು.

ತನ್ನ ಭಾಷಣದಲ್ಲಿ ಭಯೋತ್ಪಾದನೆಯ ವಿಚಾರವನ್ನು ಪ್ರಸ್ತಾಪಿಸಲು ಪ್ರಧಾನಿ ಮೋದಿ ಮರೆಯಲಿಲ್ಲ. ಭಯೋತ್ಪಾದನೆಯ ವಿಚಾರಕ್ಕೆ ಬಂದಾಗ ಜಗತ್ತಿನ ದೇಶಗಳು ತೋರುತ್ತಿರುವ ದ್ವಂದ್ವ ನೀತಿಯು ವಿಶ್ವಸಂಸ್ಥೆ ಸ್ಥಾಪನೆಗೊಂಡ ಆಶಯಗಳಿಗೆ ವಿರುದ್ಧವಾದುದಾಗಿದೆ ಎಂದು ಹೇಳುವ ಮೂಲಕ ಮೋದಿ ಅವರು ಪಾಕಿಸ್ಥಾನ, ಚೀನಾ ಸಹಿತ ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಮತ್ತು ಅಂತಹ ದೇಶಗಳಿಗೆ ಬೆಂಬಲವಾಗಿ ನಿಂತಿರುವ ದೇಶಗಳನ್ನು ತರಾಟೆಗೆ ತೆಗೆದುಕೊಂಡರು. ಮಾನವ ಜನಾಂಗದ ಉಳಿವಿಗಾಗಿ ಭಯೋತ್ಪಾದನೆಯ ವಿರುದ್ಧ ಹೋರಾಡುವುದು ಎಲ್ಲಾ ರಾಷ್ಟ್ರಗಳ ಆದ್ಯ ಕರ್ತವ್ಯವಾಗಿದೆ ಎಂದು ಮೋದಿ ವಿಶ್ವದ ರಾಷ್ಟ್ರಗಳನ್ನು ಒತ್ತಾಯಿಸಿದರು.

ವಿಶ್ವ ಶಾಂತಿಗಾಗಿ ಭಾರತ ಮಾಡಿರುವಷ್ಟು ತ್ಯಾಗವನ್ನು ಯಾವ ರಾಷ್ಟ್ರವೂ ಮಾಡಿಲ್ಲ ಎಂದು ಮೋದಿ ವಿಶ್ವ ಸಮುದಾಯದ ಮುಂದೆ ಪ್ರತಿಪಾದಿಸಿದರು. ವಿಶ್ವಸಂಸ್ಥೆಯ ಶಾಂತಿ ಕಾಪಾಡುವ ಯೋಜನೆಗೆ ಭಾರತದ ಕೊಡುಗೆ ಗಮನಾರ್ಹವಾದುದು ಎಂದು ಮೋದಿ ಇದೇ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.