ಹಾಂಕಾಂಗ್ ಸಂಸತ್ತಿಗೆ ನುಗ್ಗಿದ ಪ್ರತಿಭಟನಾಕಾರರು
ಗಾಜಿನ ಬಾಗಿಲುಗಳನ್ನು ಒಡೆದು ಆಕ್ರೋಶ
Team Udayavani, Jul 2, 2019, 5:00 AM IST
ಸಂಸತ್ ಭವನಕ್ಕೆ ನುಗ್ಗಲು ಬ್ಯಾರಿಕೇಡ್‌ಗಳನ್ನು ಮುರಿದ ಪ್ರತಿಭಟನಾಕಾರರು
ಹಾಂಕಾಂಗ್: ವಿವಾದಿತ ಗಡಿಪಾರು ಕಾನೂನು ವಿರೋಧಿಸಿ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಸೋಮವಾರ ಹಾಂಕಾಂಗ್ ಸಂಸತ್ತಿಗೆ ನುಗ್ಗಿದ್ದಾರೆ. ಬ್ಯಾರಿಕೇಡ್‌ಗಳನ್ನು ಮುರಿದು ಸಂಸತ್ ಭವನದ ಗಾಜಿನ ಬಾಗಿಲುಗಳನ್ನು ಒಡೆದು ಪ್ರತಿಭಟನಾಕಾರರು ಒಳಹೊಕ್ಕಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರಾದರೂ ಕೆಲವರು ಸಂಸತ್ತಿಗೆ ನುಗ್ಗಿದ್ದಾರೆ. ಕೆಲವು ಪ್ರತಿಭಟನಾಕಾರರು ಹಾಂಕಾಂಗ್‌ನ ರಾಷ್ಟ್ರಧ್ವಜದ ಚಿಹ್ನೆಗೆ ಮಸಿ ಬಳಿದಿದ್ದಾರೆ. ಅಲ್ಲದೆ, ಹಳೆಯ ಬ್ರಿಟಿಷ್ ಕಾಲದ ಹಾಂಕಾಂಗ್ ಧ್ವಜವನ್ನು ಕೆಲವು ಪ್ರತಿಭಟನಾಕಾರರು ಹಾರಿಸಿದ್ದಾರೆ. ಸೋಮವಾರ ಸಾವಿರಾರು ಪ್ರತಿಭಟನಾಕಾರರು ಸಂಸತ್ ಭವನದ ಎದುರು ಸೇರಿದ್ದರು. ಪೊಲೀಸರು ಲಾಠಿ ಚಾರ್ಜ್ ಮಾಡಿದರೆ ರಕ್ಷಣೆಗೆಂದು ಪ್ಲಾಸ್ಟಿಕ್ ಹೆಲ್ಮೆಟ್, ಕಾರ್ಡ್‌ಬೋರ್ಡ್ ಶೀಟ್‌ಗಳನ್ನೂ ಪ್ರತಿಭಟನಾಕಾರರು ತಂದಿದ್ದರು. ಅಷ್ಟೇ ಅಲ್ಲ, ಮುಖವನ್ನು ಮರೆಮಾಚಲು ಛತ್ರಿಗಳನ್ನೂ ತಂದಿದ್ದರು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮೆಣಸಿನ ಪುಡಿ ಹಾಗೂ ಲಾಠಿ ಬೀಸಿದರಾದರೂ ನಿಯಂತ್ರಣಕ್ಕೆ ಬರಲಿಲ್ಲ. ಈ ಘಟನೆಯನ್ನು ಹಾಂಕಾಂಗ್ ಸರ್ಕಾರ ಖಂಡಿಸಿದ್ದು, ಇದು ತೀವ್ರ ಹಿಂಸಾಕೃತ್ಯ ಎಂದಿದೆ. ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಪ್ರವೇಶಿಸುವ ಮೂಲಕ ಪೊಲೀಸರು ಹಾಗೂ ಜನಸಾಮಾನ್ಯರ ಭದ್ರತೆಗೆ ಅಪಾಯ ಉಂಟು ಮಾಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.