Prigozhin ಭೇಟಿಯಾದ ಪುತಿನ್; ಕ್ರೆಮ್ಲಿನ್‌ನಲ್ಲಿ ಸುಮಾರು 3 ಗಂಟೆಗಳ ಕಾಲ ಸಭೆ
Team Udayavani, Jul 11, 2023, 7:50 AM IST
ಮಾಸ್ಕೊ: ವ್ಯಾಗ್ನರ್ ಪಡೆಯ ದಂಗೆಯ ಕೆಲವು ದಿನಗಳ ಅನಂತರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ವ್ಯಾಗ್ನರ್ ಪಡೆಯ ಮುಖ್ಯಸ್ಥ ಪ್ರಿಗೋಜಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸೋಮವಾರ ತಿಳಿಸಿದ್ದಾರೆ.
ಜೂ.29ರಂದು ಕ್ರೆಮ್ಲಿನ್‌ನಲ್ಲಿ ಸುಮಾರು 3 ಗಂಟೆಗಳ ಕಾಲ ಸಭೆ ನಡೆದಿತ್ತು. ಅದರಲ್ಲಿ ಪ್ರಿಗೋಜಿನ್ ಸೇರಿದಂತೆ ವ್ಯಾಗ್ನರ್ ಪಡೆಯ ಕಮಾಂಡರ್‌ಗಳು ಒಳಗೊಂಡಂತೆ ಒಟ್ಟು 35 ಮಂದಿ ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಜೂ.24ರಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಮತ್ತು ರಷ್ಯಾ ಸೇನೆಯ ವಿರುದ್ಧ ದಂಗೆ ಎದ್ದ ವ್ಯಾಗ್ನರ್ ಪಡೆ, ರಾಜಧಾನಿ ಮಾಸ್ಕೊ ವಶಪಡಿಸಿಕೊಳ್ಳಲು ಮುಂದಾಗಿತ್ತು. ಅಂತಿಮವಾಗಿ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಮಧ್ಯಸ್ಥಿಕೆಯ ಬಳಿಕ ವ್ಯಾಗ್ನರ್ ಪಡೆ ದಂಗೆಯಿಂದ ಹಿಂದೆ ಸರಿದಿತ್ತು.
50,000 ರಷ್ಯಾ ಯೋಧರ ಸಾವು: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಇದುವರೆಗೂ ಸುಮಾರು 50,000 ರಷ್ಯಾ ಯೋಧರು ಹುತಾತ್ಮರಾಗಿದ್ದಾರೆ. ಈ ಪೈಕಿ ಹೆಚ್ಚಿನವರು ಯುವ ಯೋಧರಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇದೇ ವೇಳೆ, ಕಳೆದ ವಾರ ರಷ್ಯಾ ವಶದಲ್ಲಿದ್ದ ತನ್ನ 14 ಚದರ ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಉಕ್ರೇನ್ ಮತ್ತೆ ತನ್ನ ವಶಕ್ಕೆ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.