ಲಂಕಾ ಸ್ಫೋಟ : ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಪಾರು
Team Udayavani, Apr 21, 2019, 4:29 PM IST
ಕೊಲಂಬೋ: ಶ್ರೀಲಂಕಾದಲ್ಲಿ ಭಾನುವಾರ ನಡೆದ ಭೀಕರ ಬಾಂಬ್ ಸ್ಫೋಟದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಅವರು ಪಾರಾಗಿದ್ದಾರೆ.
ಟ್ವೀಟರ್‌ನಲ್ಲಿ ಬರೆದುಕೊಂಡಿರುವ ರಾಧಿಕಾ, ನಾನು ಕೊಲಂಬೋದ ಸಿನ್ನಾಮೊನ್‌ಗ್ರ್ಯಾಂಡ್ ಹೊಟೇಲ್‌ನಿಂದ ಹೊರ ಬಂದ ಕೆಲ ಹೊತ್ತಲ್ಲೇ ಸ್ಫೋಟ ಸಂಭವಿಸಿದೆ. ನನಗೆ ಈ ಆಘಾತಕಾರಿ ವಿಚಾರವನ್ನು ನಂಬಲಾಗುತ್ತಿಲ್ಲ ಎಂದು ಬರೆದಿದ್ದಾರೆ.
ಈಸ್ಟರ್ ಆಚರಣೆಯ ವೇಳೆ ಶ್ರೀಲಂಕಾ ರಾಜಧಾನಿ ಕೊಲಂಬೋ ಸೇರಿ ಮೂರು ನಗರಗಳಲ್ಲಿ ಉಗ್ರರು 8 ಕಡೆಗಳಲ್ಲಿ ಸರಣಿ ಸ್ಫೋಟಗಳನ್ನು ನಡೆಸಿದ್ದು, ಮಂಗಳೂರಿನ ಮಹಿಳೆ ಸೇರಿ ಕನಿಷ್ಠ 162 ಮಂದಿ ಪ್ರಾಣ ಕಳೆದುಕೊಂಡಿದ್ದು , 350 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸುವ ಘಟನೆ ಬಳಿಕ ದೇಶದೆಲ್ಲೆಡೆ ಕರ್‌ಫ್ಯೂ ಜಾರಿ ಗೊಳಿಸಲಾಗಿದೆ.
ಕೊಲಂಬೋಗೆ ಪತಿಯೊಂದಿಗೆ ಪ್ರವಾಸಕ್ಕೆ ತೆರಳಿದ್ದ ರಝೀನಾ ಎಂಬ ಮಹಿಳೆ ಸಾವನ್ನಪ್ಪಿರುವ ಬಗ್ಗೆ ವಿವರಗಳು ಲಭ್ಯವಾಗಿದ್ದು, ಮೃತ ಮಹಿಳೆ ಪತಿ ರಝಾಕ್ ಜೊತೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.
ಬೆಳಗ್ಗೆ 6ಕಡೆಗಳಲ್ಲಿ ನಡೆದ ಸರಣಿ ದಾಳಿಯಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದ್ದು, ಮಧ್ಯಾಹ್ನ ಕೊಲಂಬೋದ ಇನ್ನೆರಡು ಸ್ಥಳಗಳಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿದ್ದು ಆತಂಕ ಇನ್ನಷ್ಟು ಹೆಚ್ಚಾಗಿದೆ.
ಕೊಲಂಬೋ ಸೇರಿದಂತೆ ಶ್ರೀಲಂಕಾದೆಲ್ಲೆಡೆ ಹೈ ಅಲರ್ಟ್ ಘೋಷಿಸಿ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ನಿಲ್ದಾಣಗಳು, ಬಸ್ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಬೆಳಗ್ಗೆ ಮೂರು ಚರ್ಚ್‌ಗಳು ಮತ್ತು ಮೂರು ಪಂಚತಾರಾ ಹೊಟೇಲ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಮಧ್ಯಾಹ್ನ ಕೊಲಂಬೋದ ದೆಹಿವಾಲಾ ಮತ್ತು ಡೆಮೊಟಗೋಡಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ದೆಹಿವಾಲಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಬಟ್ಟಿಕಾಲೋಯಾದ ಚರ್ಚ್‌ನಲ್ಲಿ ಮೊದಲ ನ್ಪೋಟ ಸಂಭವಸಿದ್ದು, ಬಳಿಕ ಕೊಲಂಬೋದ ಕೊಚ್ಚಿಕೊಡೆಯ ಚರ್ಚ್‌ನಲ್ಲಿ ಸ್ಫೋಟ ಸಂಭವಿಸಿದೆ.
ಈಸ್ಟರ್ ಆಚರಣೆಗಾಗಿ ಭಾರೀ ಸಂಖ್ಯೆಯ ಜನರು ಚರ್ಚ್‌ನಲ್ಲಿ ಜಮಾವಣೆಗೊಂಡಿರುವುದನ್ನು ಗುರಿಯಾಗಿರಿಸಿಕೊಂಡು ಭೀಕರ ದಾಳಿ ನಡೆಸಲಾಗಿದೆ.
ಕೊಲಂಬೋ ನಗರದಲ್ಲಿ ಸೇನಾ ಪಡೆಗಳ ತುಕಡಿಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲಾ ಭದ್ರತಾ ಸಿಬಂದಿಗಳ ರಜೆ ಕಡಿತಗೊಳಿಸಲಾಗಿದೆ.
ಸಾಮಾಜಿಕ ತಾಣಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸೋಮವಾರ ಮತ್ತು ಮಂಗಳವಾರ ಸರ್ಕಾರಿ ರಜೆ ಘೋಷಿಸಲಾಗಿದೆ.
ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರು ಭದ್ರತಾ ಸಮಿತಿಯ ತುರ್ತು ಸಭೆಯನ್ನು ಕರೆದು ಸ್ಫೋಟಗಳ ಬಗ್ಗೆ ವಿವರ ಕೇಳಿದ್ದಾರೆ.
ಸ್ಫೋಟದಲ್ಲಿ ದಾಳಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಮತ್ತು
ಯಾವ ಉಗ್ರ ಸಂಘಟನೆ ದಾಳಿ ನಡೆಸಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.