ಬಹ್ರೈನ್‌ನಲ್ಲಿ ಎನ್ನಾರೈಗಳ ಜತೆ ರಾಹುಲ್ ಮಾತು
Team Udayavani, Jan 9, 2018, 6:40 AM IST
ಮನಾಮಾ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಹ್ರೈನ್ ಪ್ರವಾಸ ಸೋಮವಾರ ಆರಂಭವಾಗಿದ್ದು, ಅಲ್ಲಿನ ಎನ್ನಾರೈಗಳ ಸಮಾವೇಶದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಿದ ಬಳಿಕ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ.
ಭಾರತೀಯ ಮೂಲದವರ ಜಾಗತಿಕ ಸಂಸ್ಥೆ(ಜಿಒಪಿಐಒ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, “ನಾನು ಎಲ್ಲರನ್ನೂ ಒಗ್ಗೂಡಿಸುವಂಥ ಆಶಯವಿರುವ ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ವಹಿಸಿದ್ದೇನೆ. ಭಾರತದ ಕಲ್ಪನೆಯನ್ನು ಸಾಕಾರಗೊಳಿಸಬೇಕೆಂದರೆ ಎನ್ನಾರೈಗಳ ಪಾತ್ರವೂ ಬಹುಮುಖ್ಯ. ನಾವೆಲ್ಲರೂ ಒಂದಾಗಿ ಭಾರತದಲ್ಲಿ ಅಹಿಂಸೆಯನ್ನು ಮರಳಿ ತರಬೇಕು. ದೇಶವನ್ನು ಗಂಭೀರ ಸಮಸ್ಯೆಯಿಂದ ಹೊರತರಬೇಕು. ಗಾಂಧಿ, ಅಂಬೇಡ್ಕರ್, ನೆಹರೂ ಮುಂತಾದ ಅತ್ಯುನ್ನತ ನಾಯಕರೆಲ್ಲರೂ ಒಂದು ಕಾಲದಲ್ಲಿ ಎನ್ನಾರೈಗಳೇ ಆಗಿದ್ದರು’ ಎಂದರು. ಇದೇ ವೇಳೆ ಉದ್ಯೋಗ ಸೃಷ್ಟಿಯಲ್ಲಿ ಸರಕಾರದ ವೈಫಲ್ಯವು ಅಲ್ಲಿನ ಜನರಲ್ಲಿ ಆಕ್ರೋಶ ಹುಟ್ಟುಹಾಕುತ್ತಿದೆ ಎಂದೂ ಆರೋಪಿಸಿದರು. ಇದಕ್ಕೂ ಮುನ್ನ ಅವರು ಬಹ್ರೈನ್ ಪ್ರಧಾನಿ ಪ್ರಿನ್ಸ್ ಸಲ್ಮಾನ್ ಬಿನ್ ಹಮಸ್ ಅಲ್-ಖಲೀಫಾರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.