ಸಿತ್ರಂಗ್‌ಗೆ 24 ಬಲಿ; ಬಾಂಗ್ಲಾದಲ್ಲಿ ಚಂಡಮಾರುತದ ಅಬ್ಬರ
13 ಜಿಲ್ಲೆಗಳಲ್ಲಿ ಅಪಾರ ಹಾನಿ
Team Udayavani, Oct 25, 2022, 8:22 PM IST
ಢಾಕಾ/ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಎದ್ದ ಸಿತ್ರಂಗ್ ಚಂಡಮಾರುತವು ಬಾಂಗ್ಲಾದೇಶದಲ್ಲಿ ಜನಜೀವನವನ್ನು ಅಲ್ಲೋಲಕಲ್ಲೋಲವಾಗಿಸಿದೆ. ಸೋಮವಾರ ರಾತ್ರಿಯೇ ಬಾಂಗ್ಲಾ ಕರಾವಳಿಗೆ ಚಂಡಮಾರುತ ಅಪ್ಪಳಿಸಿದ್ದು, ಅಪಾರ ಪ್ರಮಾಣದ ಹಾನಿ ಉಂಟುಮಾಡಿದೆ. ಒಂದೇ ದಿನ ಬರೋಬ್ಬರಿ 24 ಮಂದಿಯನ್ನು ಸಿತ್ರಂಗ್ ಬಲಿಪಡೆದಿದೆ.
ಬರ್ಗುನಾ, ನರೈಲ್, ಸಿರಾಜ್‌ಗಂಜ್, ಭೋಲ್ ಸೇರಿದಂತೆ ಅತಿ ಹೆಚ್ಚು ಜನದಟ್ಟಣೆ ಇರುವ 13 ಜಿಲ್ಲೆಗಳಲ್ಲಿ ಮತ್ತು ತಗ್ಗುಪ್ರದೇಶಗಳಲ್ಲಿ ಚಂಡಮಾರುತವು ಭಾರೀ ಹಾನಿ ಉಂಟುಮಾಡಿದೆ. ಕೆಲವು ಜಿಲ್ಲೆಗಳಲ್ಲಿನ ಸಾವು-ನೋವಿನ ಮಾಹಿತಿ ಮಾತ್ರ ಬಂದಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ ಅನೇಕರು ಮರ ಬಿದ್ದು, ಮನೆ ಕುಸಿದು ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. ಒಂದೇ ಕುಟುಂಬದ ಮೂವರು ಮನೆ ಮೇಲೆ ಮರ ಬಿದ್ದ ಕಾರಣ ಅಸುನೀಗಿದ್ದಾರೆ.
ಚಂಡಮಾರುತದ ಎಫೆಕ್ಟ್ ಎಂಬಂತೆ ಬೀಸಿದ ಬಿರುಗಾಳಿಯಿಂದ ನೂರಾರು ಮರಗಳು ಧರಾಶಾಹಿಯಾಗಿವೆ. ಲೈಟ್ ಕಂಬಗಳು, ಮರಗಳು ರಸ್ತೆ ಮೇಲೆ ಉರುಳಿಬಿದ್ದ ಪರಿಣಾಮ ಹಲವು ರಸ್ತೆಗಳಲ್ಲಿ ಕೆಲ ಗಂಟೆಗಳ ಕಾಲ ಸಂಪರ್ಕವೇ ಸಾಧ್ಯವಾಗಲಿಲ್ಲ. ಮೊಬೈಲ್, ಇಂಟರ್ನೆಟ್ ಸೇವೆಗಳಲ್ಲೂ ವ್ಯತ್ಯಯ ಉಂಟಾಯಿತು.
ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ
ಭಾರತ ಬಚಾವ್!
ಸಿತ್ರಂಗ್ ಚಂಡಮಾರುತವು ಭಾರತದ ಪಶ್ಚಿಮ ಬಂಗಾಳ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಅಪಾರ ಹಾನಿ ಉಂಟುಮಾಡಬಹುದು ಎಂಬ ಆತಂಕ ದೂರವಾಗಿದೆ. ಸೋಮವಾರ ರಾತ್ರಿ ಚಂಡಮಾರುತವು ಪ.ಬಂಗಾಳ ಕರಾವಳಿಯನ್ನು ದಾಟಿ ಗಂಟೆಗೆ 56 ಕಿ.ಮೀ. ವೇಗದಲ್ಲಿ ಬಾಂಗ್ಲಾ ಕರಾವಳಿಯತ್ತ ಸಂಚರಿಸಿತು.
ಹೀಗಾಗಿ, ಬಂಗಾಳದಾದ್ಯಂತ ಅಲ್ಪಪ್ರಮಾಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಯಿತು. ಯಾವುದೇ ಸಾವು-ನೋವು, ಆಸ್ತಿಪಾಸ್ತಿ ಹಾನಿ ಉಂಟಾಗಲಿಲ್ಲ. ಆದರೆ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರದಲ್ಲಿ ಧಾರಾಕಾರ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.