ತೀವ್ರ ಬಿಕ್ಕಟ್ಟು: ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ರಾಜೀನಾಮೆ
ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ....
Team Udayavani, Jul 9, 2022, 7:04 PM IST
ಕೊಲಂಬೊ : ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹುದ್ದೆಗೆ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ.
ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾನಿಲ್ ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ.
ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರದಲ್ಲಿ ಜನರು ರೊಚ್ಚಿಗೆದ್ದು ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉದ್ರಿಕ್ತ ಜನರು ನಿವಾಸಕ್ಕೆ ಮುತ್ತಿಗೆ ಹಾಕುವ ಮುನ್ನ ಗೊಟಬಯಾ ರಾಜಪಕ್ಸ ಪರಾರಿಯಾಗಿದ್ದಾರೆ.
To ensure the continuation of the Government including the safety of all citizens I accept the best recommendation of the Party Leaders today, to make way for an All-Party Government.
To facilitate this I will resign as Prime Minister.
— Ranil Wickremesinghe (@RW_UNP) July 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.