ಕಾಶ್ಮೀರ ಸಮಸ್ಯೆ ನಿವಾರಣೆಗಾಗಿ ಮಧ್ಯಸ್ಥಿಕೆ ವಹಿಸಲು ಸಿದ್ಧ: ಟ್ರಂಪ್
Team Udayavani, Jul 23, 2019, 5:00 AM IST
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ದಶಕಗಳಷ್ಟು ಹಳೆಯದಾದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವಲ್ಲಿ, ಎರಡೂ ದೇಶಗಳು ಒಪ್ಪಿದರೆ ತಾವು ಮಧ್ಯಸ್ಥಿಕೆಗೆ ವಹಿಸಲು ಸಿದ್ಧ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ಗೆ ತಿಳಿಸಿದ್ದಾರೆ.
ಸದ್ಯಕ್ಕೆ ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ‘ಶ್ವೇತಭವನ’ದಲ್ಲಿ ಭೇಟಿಯಾದ ವೇಳೆ ಟ್ರಂಪ್, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ತಮ್ಮನ್ನು ಭೇಟಿ ಮಾಡಿದ್ದಾಗ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿದ್ದಾಗಿ ಟ್ರಂಪ್, ಖಾನ್ ಅವರಿಗೆ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಖಾನ್, ನೀವು ಮಧ್ಯಸ್ಥಿಕೆ ವಹಿಸಿದಲ್ಲಿ ಕಣಿವೆ ರಾಜ್ಯದ ಲಕ್ಷಾಂತರ ಮಂದಿಯ ಹಾರೈಕೆ ನಿಮ್ಮ ಬೆನ್ನಿಗಿರಲಿದೆ ಎಂದು ಹೇಳಿದ್ದಾರೆ.
ವಿವಾದಕ್ಕೀಡಾದ ಹೇಳಿಕೆ: ಮೋದಿಯವರ ಬಗ್ಗೆ ಟ್ರಂಪ್ ನೀಡಿರುವ ಹೇಳಿಕೆ ಭಾರತದಲ್ಲಿ ವಿವಾದಕ್ಕೀಡಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ, ಮೋದಿಯವರು ನಿಜಕ್ಕೂ ಹೀಗೊಂದು ಆಮಂತ್ರಣ ನೀಡಿದ್ದರೆ, ಅದು ಭಾರತದ ಹಿತಾಸಕ್ತಿಗೆ ಮಾರಕವಾಗಲಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ, ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಈ ಕುರಿತಂತೆ ಸರ್ಕಾರದ ಸ್ಪಷ್ಟನೆ ಕೋರಿದ್ದಾರೆ.
ಸ್ಪಷ್ಟನೆ ನೀಡಿದ ರವೀಶ್: ಟ್ರಂಪ್ ಹೇಳಿಕೆ ವಿವಾದವಾಗಿ ಮಾರ್ಪಡುತ್ತಲೇ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ‘ಕಾಶ್ಮೀರ ಸಮಸ್ಯೆಯನ್ನು ಭಾರತವು ದ್ವಿಪಕ್ಷೀಯ ನೆಲೆಯಲ್ಲೇ ಬಗೆಹರಿಸಲು ಇಚ್ಛಿಸುತ್ತದೆ. ತನ್ನ ನಿಲುವಿಗೆ ಭಾರತ ಎಂದಿಗೂ ಬದ್ಧವಾಗಿರಲಿದೆ. ಪ್ರಧಾನಿ ಮೋದಿಯವರು ಈ ಹಿಂದೆ ಎಲ್ಲೂ ಟ್ರಂಪ್ ಅವರ ಮಧ್ಯಸ್ಥಿಕೆಗಾಗಿ ಕೋರಿಲ್ಲ. ಭಯೋತ್ಪಾದನೆ ನಿಲ್ಲಿಸಿದರಷ್ಟೇ ಪಾಕಿಸ್ತಾನದ ಜತೆಗೆ ಭಾರತ ಮಾತುಕತೆಗೆ ಸಿದ್ಧ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.