ಬ್ರಿಟನ್ ಪ್ರಧಾನಿ ಹುದ್ದೆಯತ್ತ ರಿಷಿ ಸುನಕ್ ದಾಪುಗಾಲು?
ಕನ್ಸರ್ವೇಟಿವ್ ಪಕ್ಷದ 20ಕ್ಕೂ ಹೆಚ್ಚು ಸಂಸದರ ಬೆಂಬಲ: ಸೆ. 5ರಂದು ಹೊಸ ಪ್ರಧಾನಿಯ ಹೆಸರು ಘೋಷಣೆ ಸಾಧ್ಯತೆ
Team Udayavani, Jul 12, 2022, 8:52 PM IST
ಲಂಡನ್: ಬ್ರಿಟನ್ನ ಮಾಜಿ ಹಣಕಾಸು ಸಚಿವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಬ್ರಿಟನ್ನ ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಈಗ ಮತ್ತಷ್ಟು ಹೆಚ್ಚಾಗಿದೆ.
ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ 20ಕ್ಕೂ ಹೆಚ್ಚು ಮಂದಿ ಸಂಸದರು ಅವರಿಗೆ ಬೆಂಬಲ ನೀಡಿದ್ದಾರೆ. ಬ್ರಿಟನ್ನ ಯಾರ್ಕ್ಶೈರ್ನಲ್ಲಿರುವ ರಿಚ್ಮಂಡ್ ಕ್ಷೇತ್ರದ ಸಂಸದರಾಗಿರುವ ಅವರು, ಪ್ರಧಾನಿ ಹುದ್ದೆ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕನ ಸ್ಥಾನಕ್ಕೆ ಅವರೇ ಮುಂಚೂಣಿಯಲ್ಲಿ ಇದ್ದಾರೆ. ಅವರ ಜತೆಗೆ ಪ್ರತಿಸ್ಪರ್ಧಿಗಳಾಗಿ ವಾಣಿಜ್ಯ ಸಚಿವ ಪೆನ್ನಿ ಮಾರ್ಡೆಂಟ್, ವಿತ್ತ ಸಚಿವ ನದೀಮ್ ಝಹಾವಿ, ಟಾಂ ಟಗ್ನೇಧಟ್ ಇದ್ದಾರೆ. ಅವರ ಜತೆಗೆ ಭಾರತೀಯ ಮೂಲದ ಸ್ವೆಲ್ಲಾ ಬ್ರವೆರ್ಮಾನ್, ವಿದೇಶಾಂಗ ಸಚಿವೆ ಲಿಜ್ ಟ್ರಸ್ ಸೇರಿದಂತೆ ಪ್ರಮುಖರು ಇದ್ದಾರೆ.
ಸೆ. 5ರಂದು ಹೆಸರು ಘೋಷಣೆ:
ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯ ಹೆಸರನ್ನು ಸೆ.5ರಂದು ಪ್ರಕಟಿಸಲಾಗುತ್ತದೆ. ಈ ಬಗ್ಗೆ ಟೋರಿ ನಾಯಕನನ್ನು ಆಯ್ಕೆ ಮಾಡುವ ಸಮಿತಿ, “1922 ಸಮಿತಿ’ ಪ್ರಕಟಿಸಿದೆ. ಈ ಸಮಿತಿ ನೂತನ ಪ್ರಧಾನಮಂತ್ರಿಯ ಆಯ್ಕೆಗೆ ಸಂಬಂಧಿಸಿದಂತೆ ಇರುವ ನಿಯಮಗಳು ಮತ್ತು ಚುನಾವಣೆಗಳ ವಿವರಗಳನ್ನು ಈಗಾಗಲೇ ಪ್ರಕಟಿಸಿದೆ. ಒಟ್ಟು ರಿಷಿ ಸುನಕ್ ಸೇರಿದಂತೆ 11 ಮಂದಿ ಪ್ರಧಾನಿ ಹುದ್ದೆಗೆ ಚುನಾವಣೆಗಾಗಿ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.