Canada ಭೀಕರ ರಸ್ತೆ ಅಪಘಾತ: ಕನಿಷ್ಠ 15 ಜನ ಮೃತ್ಯು ,10 ಮಂದಿಗೆ ಗಾಯ
ಸೆಮಿ ಟ್ರೈಲರ್ ಟ್ರಕ್-ಬಸ್ ಡಿಕ್ಕಿ
Team Udayavani, Jun 16, 2023, 9:23 AM IST
ಒಟ್ಟಾವಾ(ಕೆನಡಾ): ಕೆನಡಾದ ಮ್ಯಾನಿಟೋಬಾದ ಕಾರ್ಬೆರಿ ಪಟ್ಟಣದ ಬಳಿ ಸೆಮಿ ಟ್ರೈಲರ್ ಟ್ರಕ್ ಮತ್ತು ಹಿರಿಯ ನಾಗರಿಕರು ಪ್ರಯಾಣಿಸುತ್ತಿದ್ದ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 10 ಮಂದಿಗೂ ಹೆಚ್ಚು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇನ್ನೂ 10 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ರಸ್ತೆ ಅಪಘಾತವು ಕಾರ್ಬೆರಿಯ ಉತ್ತರದ ಟ್ರಾನ್ಸ್-ಕೆನಡಾ ಹೆದ್ದಾರಿಯಲ್ಲಿ ಸಂಭವಿಸಿದೆ. ರಸ್ತೆ ಅಪಘಾತದ ನಂತರ ತುರ್ತು ವಾಹನಗಳು ಮತ್ತು ಎರಡು ಹೆಲಿಕಾಪ್ಟರ್ಗಳು ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿದವು. ಈ ಅವಘಡದಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಕೆನಡಾದ ಪ್ರಧಾನಿ ಸಂತಾಪ
ರಸ್ತೆ ಅಪಘಾತ ದುರಂತಕ್ಕೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ‘ಕಾರ್ಬೆರಿ, ಮ್ಯಾನಿಟೋಬಾದಿಂದ ಬಂದ ಸುದ್ದಿ ನಂಬಲಾಗದಷ್ಟು ದುಃಖವಾಗಿದೆ. ಇಂದು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.