ಪುಟಿನ್ ಮತ್ತೆ ಅಧ್ಯಕ್ಷ: 4ನೇ ಬಾರಿಗೆ ರಷ್ಯಾ ಅಧಿಕಾರ ಚುಕ್ಕಾಣಿ
Team Udayavani, Mar 20, 2018, 7:30 AM IST
ಮಾಸ್ಕೋ: ರಷ್ಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಲಾಡಿಮಿರ್ ಪುಟಿನ್ ಪುನಃ 6 ವರ್ಷಗಳವರೆಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಆದರೆ ಪಾಶ್ಚಿಮಾತ್ಯ ದೇಶಗಳ ಜತೆಗಿನ ರಷ್ಯಾ ಸಂಬಂಧ ಹಳಸಿದ್ದರಿಂದಾಗಿ, ಕೆಲವೇ ದೇಶಗಳು ಪುಟಿನ್‌ಗೆ ಶುಭಾಶಯ ಕೋರಿದ್ದು ಗಮನಾರ್ಹವಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
ಎರಡು ದಶಕಗಳವರೆಗೆ ರಷ್ಯಾವನ್ನು ಆಳಿದ ಪುಟಿನ್, ಈ ಬಾರಿ ಶೇ. ಶೇ. 67ರಷ್ಟು ಮತ ಪಡೆದಿದ್ದಾರೆ. 2024ರ ವರೆಗೆ ಅಧ್ಯಕ್ಷ ಸ್ಥಾನದಲ್ಲಿರುವ ಪುಟಿನ್, ಸ್ಟಾಲಿನ್ ನಂತರದಲ್ಲಿ ಅತ್ಯಂತ ಹೆಚ್ಚು ಅವಧಿಗೆ ಅಧಿಕಾರದಲ್ಲಿರುವ ಏಕೈಕ ನಾಯಕ ಅವರಾಗಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಶೇ. 76.66ರಷ್ಟು ದಾಖಲೆಯ ಮತದಾನವಾಗಿದ್ದು, ಪುಟಿನ್ ಪರವಾಗಿ ಮತದಾನವಾಗಿದೆ. ಇದು ನಿರೀಕ್ಷೆಗಿಂತ ಶೇ. 80ರಿಂದ 10ರಷ್ಟು ಹೆಚ್ಚಿನದಾಗಿತು. 2014ರಲ್ಲಿ ಉಕ್ರೇನ್‌ನಿಂದ ವಶಪಡಿಸಿಕೊಂಡ ಕ್ರಿಮಿಯಾದಲ್ಲಿ ಶೇ. 92ರಷ್ಟು ಮತಗಳನ್ನು ಪುಟಿನ್ ಪಡೆದಿದ್ದಾರೆ. ಮತದಾನದಲ್ಲಿ ಅಕ್ರಮ ನಡೆಸಿರುವ ಆರೋಪವನ್ನು ಪ್ರತಿಪಕ್ಷಗಳು ಮಾಡಿವೆ. ಕ್ರೆಮ್ಲಿನ್‌ನಲ್ಲಿ ಪುಟಿನ್ ಪರವಾಗಿ ಭಾರಿ ಸಂಖ್ಯೆಯಲ್ಲಿ ಮತದಾನವಾಗಿದ್ದು, ಈ ಆರೋಪಗಳಿಗೆ ಕಾರಣವಾಗಿದೆ.ಈ ಬಾರಿ ಚುನಾವಣೆಯಲ್ಲಿ ಪುಟಿನ್‌ಗೆ ಏಳು ಜನರು ಪ್ರತಿಸ್ಪರ್ಧಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.