ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆ ಖರೀದಿಗೆ ಸಿದ್ಧತೆ
Team Udayavani, Jun 3, 2017, 3:45 AM IST
ಸೇಂಟ್ ಪೀಟರ್ಸ್‌ಬರ್ಗ್: ನೆರೆಯ ಚೀನಾ ಹಾಗೂ ಪಾಕಿಸ್ತಾನಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಬಲ್ಲ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ರಷ್ಯಾದಿಂದ ಖರೀದಿಸಲು ಭಾರತ ಉತ್ಸುಕವಾಗಿದೆ. ರಷ್ಯಾ ಜತೆಗಿನ ಸಂಬಂಧವನ್ನು ಈ ನಿರ್ಧಾರ ಇನ್ನಷ್ಟು ಗಟ್ಟಿಗೊಳಿಸಲಿದೆ.
ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಭಾರತಕ್ಕೆ ಪೂರೈಸಲು ರಷ್ಯಾ ತಯಾರಿಯಲ್ಲಿದೆ ಎಂದು ರಷ್ಯಾದ ಉಪ ಪ್ರಧಾನಿ ಡಿಮಿಟ್ರಿ ರೊಗಝಿನ್ ಅವರು ಶುಕ್ರವಾರ ಹೇಳಿದ್ದಾರೆ. ಈಗಾಗಲೇ ಈ ಕುರಿತ ಒಪ್ಪಂದವಾಗಿದ್ದು, ಪೂರೈಕೆ ಬಗ್ಗೆ ಮಾತುಕತೆ ಪ್ರಗತಿಯಲ್ಲಿದೆ ಎಂದಿದ್ದಾರೆ. ಕಳೆದ ವರ್ಷ ಅ.15ರಂದು ಈ ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಭಾರತ ರಷ್ಯಾದೊಂದಿಗೆ ಸಹಿ ಹಾಕಿತ್ತು. ಒಟ್ಟು 5 ಬಿಲಿಯನ್ ಡಾಲರ್ ಮೌಲ್ಯದ ಒಪ್ಪಂದ ಇದಾಗಿದ್ದು, ರಷ್ಯಾ 5 ಎಸ್-400 ಅನ್ನು ಪೂರೈಸಲು ಒಪ್ಪಿತ್ತು.
400 ಕಿ.ಮೀ.ವರೆಗಿನ ವ್ಯಾಪ್ತಿಯಲ್ಲಿ ಶತ್ರು ವಿಮಾನ, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ನಾಶ ಮಾಡುವ ಸಾಮರ್ಥ್ಯ ಎಸ್-400 ವ್ಯವಸ್ಥೆಗಿದೆ. 2015ರಲ್ಲಿ ಚೀನಾವು ರಷ್ಯಾದಿಂದ ಈ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಿತ್ತು. ಆ ಮೂಲಕ ರಷ್ಯಾದ ಮೊದಲ ಅಂತಾರಾಷ್ಟ್ರೀಯ ಗ್ರಾಹಕ ಎಂದು ಕರೆಸಿಕೊಂಡಿತ್ತು. ಆದರೆ, ರಷ್ಯಾದ ಈ ಎಸ್-400ಗೆ ಸರಿಸಮಾನವಾದ ಯಾವುದೇ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪಾಕಿಸ್ತಾನದ ಬಳಿಯಿಲ್ಲ. ಈಗ ಭಾರತವು ಇದನ್ನು ಖರೀದಿಸಲು ಮುಂದಾಗಿರುವುದು ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.