ಸಿಡಿಯುತ್ತಿದೆ ಕ್ಷಿಪಣಿ; ಪಾರು ಮಾಡಿ ಪ್ಲೀಸ್‌ ಭಾರತೀಯ ವಿದ್ಯಾರ್ಥಿಗಳ ಅಳಲು

Team Udayavani, Mar 5, 2022, 8:15 AM IST

ಸಿಡಿಯುತ್ತಿದೆ ಕ್ಷಿಪಣಿ; ಪಾರು ಮಾಡಿ ಪ್ಲೀಸ್‌ ಭಾರತೀಯ ವಿದ್ಯಾರ್ಥಿಗಳ ಅಳಲು

ನವದೆಹಲಿ/ಕೀವ್‌: “ಪ್ಲೀಸ್‌ ನಮ್ಮನ್ನು ಸುಮಿ ನಗರದಿಂದ ತಕ್ಷಣ ಪಾರು ಮಾಡಿ. ಇಲ್ಲಿ ಕ್ಷಿಪಣಿ ದಾಳಿಯಾಗುತ್ತಿದೆ. ಆಹಾರ, ಕುಡಿವ ನೀರು ಸಿಗುವುದು ಕಮ್ಮಿಯಾಗಿದೆ. ಇಲ್ಲಿ 700-800 ಮಂದಿ ಭಾರತದ ವಿದ್ಯಾರ್ಥಿಗಳಿದ್ದಾರೆ’

– ಇದು ಯುದ್ಧ ಪೀಡಿತ ಉಕ್ರೇನ್‌ನ ಈಶಾನ್ಯ ಭಾಗದ ನಗರ ಸುಮಿಯಲ್ಲಿ ಸಿಕ್ಕಿ ಹಾಕಿಕೊಂಡಿರುವ ವಿದ್ಯಾರ್ಥಿಗಳು ದುಃಖ ತೋಡಿಕೊಂಡ ಪರಿ. ಭಾರತದ ರಾಯಭಾರ ಕಚೇರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಇಲ್ಲವೆಂದು ದೂರಿದ್ದಾರೆ. ಹೀಗಾಗಿ, ಅವರು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರಿಗೆ ಪತ್ರ ಬರೆದು, ಕ್ಷಿಪ್ರವಾಗಿ ರಕ್ಷಿಸುವಂತೆ ಕೋರಿಕೆ ಸಲ್ಲಿಸಿದ್ದಾರೆ. ಅವರೆಲ್ಲರೂ ಸುಮಿ ಸ್ಟೇಟ್‌ ವಿಶ್ವವಿದ್ಯಾನಿಲಯದಲ್ಲಿ ಎಂಬಿಬಿಎಸ್‌ ಕಲಿಯುತ್ತಿದ್ದಾರೆ.

ಕುಡಿವ ನೀರಿಗಾಗಿ ವಿದ್ಯಾರ್ಥಿಗಳು ಮಂಜುಗಡ್ಡೆ ಹೆಕ್ಕಿಕೊಂಡು ಬಿಸಿ ಮಾಡಿ ನೀರು ಮಾಡುವ ವಿಡಿಯೋವನ್ನು ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಮೆಹೆಕ್‌ ಶೇಖ್‌ ಎಂಬ ವಿದ್ಯಾರ್ಥಿನಿ ಅವರು ಇರುವ ಸ್ಥಳದಲ್ಲಿ ಶೆಲ್‌ ದಾಳಿಯಾಗುವ ಬಗ್ಗೆ ವಿಡಿಯೋ ಅಪ್‌ಲೋಡ್‌ ಮಾಡಿದ್ದಾರೆ. ಜತೆಗೆ ಆಹಾರ ಮತ್ತು ನೀರಿನ ಕೊರತೆ ಇದೆ ಎಂದು ದೂರಿದ್ದಾರೆ. ರಾಧಿಕಾ ಸಗ್ವಾನ್‌ ಎಂಬ ವೈದ್ಯ ವಿದ್ಯಾರ್ಥಿನಿ 700-800 ಮಂದಿ ವೈದ್ಯ ವಿದ್ಯಾರ್ಥಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ. ನಮ್ಮೆಲ್ಲರನ್ನು ಪಾರು ಮಾಡುವ ಯಾವ ಸುಳಿವೂ ಇಲ್ಲ. ಈ ಪ್ರದೇಶದಲ್ಲಿ 7 ದಿನ ದಾಳಿ ನಡೆಯುತ್ತಿದೆ ಎಂದು ಅವರು ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ರಷ್ಯಾದ ಕ್ಷಿಪಣಿ, ಬಾಂಬ್‌ ದಾಳಿಯಿಂದಾಗಿ ಸುಮಿ ನಗರದ ಸುತ್ತಮುತ್ತ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಸೇತುವೆಗಳು ಧ್ವಂಸಗೊಂಡಿವೆ.

ಅಪಾಯದಲ್ಲಿದ್ದಾರೆ 1 ಸಾವಿರ ವಿದ್ಯಾರ್ಥಿಗಳು
ಯುದ್ಧಪೀಡಿತ ಉಕ್ರೇನ್‌ನಲ್ಲಿ 1 ಸಾವಿರ ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ. ಈ ಪೈಕಿ ಸುಮಿಯಲ್ಲಿ 700, 300 ಮಂದಿ ಖಾರ್ಕಿವ್‌ನಲ್ಲಿ ಇದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಂ ಬಗಚಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರನ್ನು ಪಾರು ಮಾಡುವುದೇ ಸರ್ಕಾರದ ಆದ್ಯತೆ. ಬಸ್‌ಗಳ ಮೂಲಕ ಅವರನ್ನು ಗಡಿ ದಾಟಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ. ಇನ್ನೂ 2ರಿಂದ 3 ಸಾವಿರ ಮಂದಿ ಭಾರತೀಯರು ಇದ್ದಾರೆ. ಆಪರೇಷನ್‌ ಗಂಗಾ ಮೂಲಕ ಆ ದೇಶದಿಂದ ಎಲ್ಲರನ್ನೂ ಪಾರು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಸ್ಥಳೀಯವಾಗಿ ಕದನ ವಿರಾಮ ಉಂಟಾದರೆ ಕೊಂಚ ಅನುಕೂಲವಾಗಲಿದೆ ಎಂದರು ಬಗಚಿ. ಮುಂದಿನ 24 ಗಂಟೆಗಳಲ್ಲಿ 16 ವಿಮಾನಗಳ ಮೂಲಕ ವಿದ್ಯಾರ್ಥಿಗಳು ಆಗಮಿಸಲಿದ್ದಾರೆ ಎಂದರು. ಫೆ.15ರ ಬಳಿಕ ಸುಮಾರು 20 ಸಾವಿರ ಮಂದಿ ಉಕ್ರೇನ್‌ ಗಡಿ ದಾಟಿದ್ದಾರೆ ಎಂದರು. ಇದುವರೆಗೆ 48 ವಿಮಾನಗಳ ಮೂಲಕ 10,300 ಮಂದಿ ವಿದ್ಯಾರ್ಥಿಗಳು ದೇಶಕ್ಕೆ ಆಗಮಿಸಿದ್ದಾರೆ ಎಂದರು.

ಇಂದು 11 ವಿಮಾನ ಆಗಮನ: 11 ವಿಮಾನ ಮತ್ತು ಐಎಎಫ್ನ 4 ವಿಮಾನಗಳ ಮೂಲಕ ಶನಿವಾರ 2,200ಕ್ಕೂ ಅಧಿಕ ಮಂದಿ ದೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ. ಶುಕ್ರವಾರ 14 ವಿಮಾನಗಳು, ಐಎಎಫ್ನ ಮೂರು ವಿಮಾನಗಳ 3,772 ಮಂದಿ ಆಗಮಿಸಿದ್ದಾರೆ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.