ಕಾಲೇಜಿಗೆ ಬಂದ್ರೂ ಈ ದೇಶದಲ್ಲಿ ಸಿಗುತ್ತೆ ಸಂಬಳ!
Team Udayavani, Sep 24, 2019, 5:10 PM IST
ಉನ್ನತ ವ್ಯಾಸಂಗ ಪಡೆಯುವ ವಿದ್ಯಾರ್ಥಿಗಳಿಗೆ ಮಾಸಿಕ 9406 ರೂ. ವೇತನ
ಡೆನ್ಮಾರ್ಕ್ ಸರಕಾರದ ಯೋಜನೆ
ಮಣಿಪಾಲ : ಲಕ್ಷಾಂತರ ರೂಪಾಯಿ ಕಟ್ಟಿ ಸ್ಕೂಲ್-ಕಾಲೇಜಿಗೆ ಹೋಗವುದನ್ನ ನೋಡಿದ್ದೇವೆ. ಆದರೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಬರುವುಕ್ಕೂ ಸಂಬಳ ಕೊಡುತ್ತಾರೆ. ಇಲ್ಲೊಂದು ದೇಶದಲ್ಲಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ತಿಂಗಳ ಲೆಕ್ಕದಲ್ಲಿ ವೇತನ ನೀಡುತ್ತಿದ್ದು, ಒಂದೂ ರೂಪಾಯಿ ತೆಗೆದುಕೊಳ್ಳದೇ ಉಚಿತ ಶಿಕ್ಷಣವನ್ನೂ ನೀಡುತ್ತಿದೆ.
ಉನ್ನತ ವ್ಯಾಸಂಗಕ್ಕೆ ವೇತನ
ಡೆನ್ಮಾರ್ಕ್ ದೇಶ ವಿದ್ಯಾರ್ಥಿಗಳಿಗೆ ಸಂಬಳ ಕೊಡುತ್ತಿದೆ. ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಇಚ್ಚಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ಮಾಸಿಕ ವೇತನವಿದೆ.
ಉದ್ದೇಶ ಏನು ?
ಸಾಕ್ಷರತೆ ಹೆಚ್ಚಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ. ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ವ್ಯಾಸಂಗಕ್ಕೆ ಬರಬೇಕೆನ್ನುವ ಉದ್ದೇಶ ಇದರ ಹಿಂದಿದೆ.
ಯಾರು ಅರ್ಹರು ?
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ಇಚ್ಛಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳ ಖರ್ಚುವೆಚ್ಚವನ್ನು ಕಾಲೇಜಿನ ಆಡಳಿತ ವ್ಯವಸ್ಥೆ ನೀಡುತ್ತದೆ.
ಸಂಬಳ ಎಷ್ಟು ?
ತಿಂಗಳಿಗೆ 9406 ರೂ. ಗಳಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ವೇತನ ನೀಡುತ್ತಿದ್ದು, ಕಲಿಕೆಯಲು ಮುಂದಿರುವ ಹಾಗೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ವೇತನದ ಮೊತ್ತವನ್ನು ಹೆಚ್ಚಿಸುತ್ತದೆ.
ಸಂಬಳವನ್ನು ವಾಪಸ್ ನೀಡಬೇಕೆಂದಿಲ್ಲ !
ವಿದ್ಯಾರ್ಥಿಗಳು ಪಡೆಯುತ್ತಿರುವ ಸಂಬಳವನ್ನು ಸರಕಾರ ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ. ಒಂದು ವೇಳೆ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಕಡಿತಗೊಳಿಸಿದರೂ ವಿದ್ಯಾರ್ಥಿಗಳಿಗೆ ನೀಡಿದ ವೇತನವನ್ನು ವಾಪಸ್ ಕೇಳುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.