ಪ್ರವಾಸಿಗರಿಗೆ ವೀಸಾ, ವಸ್ತ್ರ ಸಂಹಿತೆ ಸಡಿಲಗೊಳಿಸಿದ ಸೌದಿ
Team Udayavani, Oct 4, 2019, 9:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸೌದಿ ಅರೇಬಿಯಾ: ವಿಚಿತ್ರ ನಿಯಮ ಹಾಗೂ ಕಟ್ಟುಪಾಡುಗಳಿಂದ ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದ್ದ ಸೌದಿ ಅರೇಬಿಯಾದಲ್ಲಿ ಪ್ರವಾಸೋದ್ಯಮನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದೀಗ ಕೆಲವೊಂದು ನಿಯಮಗಳನ್ನು ಆ ಕಟ್ಟರ್ ಸಾಂಪ್ರದಾಯಿಕ ದೇಶ ಸಡಿಲಗೊಳಿಸಿದೆ. ಇದರಿಂದಾ ವಿದೇಶಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ತನ್ನ ದೇಶಕ್ಕೆ ಆಕರ್ಷಿಸುವ ಗುರಿಯನ್ನು ಸೌದಿ ಆಡಳಿತ ಹಾಕಿಕೊಂಡಿದೆ.
ತನ್ನ ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಟ್ಟರ್ ಸಂಪ್ರದಾಯವಾದಿ ಇಸ್ಲಾಂ ದೇಶ ಮಾಡಿಕೊಂಡಿರುವ ನಿಯಮ ಸಡಿಲಿಕೆಗಳೇನು ಎನ್ನುವುದನ್ನು ನೋಡುವುದಾದರೆ..:
ಪ್ರವಾಸಿಗರ ವೀಸಾ ವಿತರಣೆ
ಕಟ್ಟರ್ ಮುಸ್ಲಿಂ ಮೂಲಭೂತವಾದಿ ರಾಷ್ಟ್ರವೆಂದೇ ಕರೆಯಲಾಗುತ್ತಿದ್ದ ಸೌದಿ ಅರೇಬಿಯಾ ಪ್ರಮುಖ ನಿರ್ಣಯ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ದೇಶದಿಂದ ಪ್ರವಾಸಿಗರ ವೀಸಾ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ಕಳೆದ ತಿಂಗಳಿನಲ್ಲಿ ಅರಬ್ ದೇಶದ ತೈಲ ಸ್ಥಾವರಗಳ ಮೇಲೆ ದಾಳಿ ನಡೆದಿದ್ದು, ಅಲ್ಲಿನ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಮಹತ್ತರವಾದ ನಿರ್ಧಾರ ಕೈಗೊಂಡಿರುವ ಸೌದಿ ದೇಶ ಆರ್ಥಿಕತೆಯನ್ನು ಪ್ರಬಲಗೊಳಿಸುವ ದೃಷ್ಟಿಯಿಂದ ಪ್ರವಾಸೋದ್ಯಮದತ್ತ ಚಿತ್ತ ನೆಟ್ಟಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುವ ಕಾರ್ಯತಂತ್ರ ರೂಪಿಸಿಕೊಂಡಿದೆ.
ವಸ್ತ್ರ ಸಂಹಿತೆ ವಿನಾಯಿತಿ
ಈ ಹಿಂದೆ ಬುರ್ಕಾ ಧರಿಸದ ವಿದೇಶಿ ಮಹಿಳೆಯರಿಗೆ ಅರಬ್ ನ ಸಾರ್ವಕಜನಿಕ ಸ್ಥಳಗಳಲ್ಲಿ ಹಾಗೂ ಪ್ರವಾಸಿ ತಾಣಗಳಲ್ಲಿ ಪ್ರವೇಶವನ್ನು ನಿಷೇಧಗೊಳಿಸಲಾಗಿತ್ತು. ಆದರೆ ಪರಿಸ್ಥಿತಿಗೆ ತಕ್ಕಂತೆ ಬದಲಾಗಿರುವ ಅರಬ್ ದೇಶ ವಸ್ತ್ರಸಂಹಿತೆಯಲ್ಲಿ ನಿಯಮದಲ್ಲಿ ಸ್ವಲ್ಪ ಸಡಿಲಿಕೆ ಮಾಡಿದ್ದು, ವಿದೇಶಿ ಮಹಿಳೆ ಯಾತ್ರಿಗಳಿಗೆ ಸೌದಿ ಅರೇಬಿಯಾದ ಕಠಿಣ ವಸ್ತ್ರ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.
ದಿಢೀರ್ ಬದಲಾವಣೆ ಯಾಕೆ ?
ಪ್ರವಾಸೋದ್ಯಮವನ್ನು ಆರ್ಥಿಕ ವ್ಯವಸ್ಥೆಯ ಪ್ರಮುಖ ಆದಾಯ ಮೂಲವನ್ನಾಗಿ ಮಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಪ್ರವಾಸಿಗರಿಗೆ ಮುಕ್ತ ಪ್ರವೇಶ
ಅಂತರಾಷ್ಟ್ರೀಯ ಪ್ರವಾಸಿಗರಿಗೆ ಪೂರಕವಾದ ವಾತವಾರಣ ಕಲ್ಪಿಸುವ ಮೂಲಕ ಮುಕ್ತ ಪ್ರವೇಶ ಒದಗಿಸುವ ಉದ್ಧೇಶವನ್ನಿಟ್ಟುಕೊಂಡಿರುವ ಸೌದಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ.
ಆನ್ ಲೈನ್ ಅರ್ಜಿಗಳಿಗೆ ಚಾಲನೆ
ನಲವತ್ತೊಂಬತ್ತು ದೇಶಗಳ ನಾಗರಿಕರಿಗೆ ಆನ್ ಲೈನ್ ವೀಸಾ ಅರ್ಜಿಗಳನ್ನು ನೀಡುವ ಪ್ರಕ್ರಿಯೆಗೆ ಈಗಾಗಲೇ ಸೌದಿ ಅರೇಬಿಯಾ ಚಾಲನೆ ನೀಡಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.
ಯಾಕೆ ವಿಶೇಷ ಈ ದೇಶ ?
ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಗಳಿಸಿಕೊಂಡಿರುವ ಐದು ಪ್ರವಾಸಿ ತಾಣಗಳು ಸೌದಿ ಅರೇಬಿಯಾದಲ್ಲಿದೆ. ಸ್ಥಳೀಯ ಸಂಸ್ಕೃತಿ ಹಾಗೂ ಪ್ರಾಕೃತಿಕ ಸೌಂದರ್ಯಕ್ಕೆ ಸೌದಿ ಅರೇಬಿಯಾ ವಿಶೇಷ ಎನ್ನಿಸಿಕೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.