ಕಚ್ಚಾ ತೈಲ ಬೆಲೆ ಏರಿಸಲು ಸೌದಿ ದೇಶಗಳ ಒಲವು
Team Udayavani, Sep 10, 2019, 5:10 AM IST
ಅಬುಧಾಬಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಉತ್ಪಾದನೆಯನ್ನು ಕಡಿತಗೊಳಿಸಬೇಕು ಎಂದು ಸೌದಿ ಅರೇಬಿಯಾದ ಇಂಧನ ಸಚಿವ ರಾಜಕುಮಾರ ಅಬ್ದುಲ್ಲ ಜೀಜ್ ಬಿನ್ ಸಲ್ಮಾನ್ ಹೇಳಿದ್ದಾರೆ. ಹೀಗಾಗಿ ಒಂದು ವೇಳೆ ಸೌದಿ ದೇಶಗಳು ಕಚ್ಚಾ ತೈಲ ಉತ್ಪಾದನೆ ಕಡಿತಗೊಳಿಸಿದರೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾನುವಾರವಷ್ಟೇ ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು, ನಮ್ಮ ತೈಲ ನೀತಿಯ ಮೂಲ ನಿಯಮವನ್ನು ಬದಲಿಸುವುದಿಲ್ಲ ಎಂದಿದ್ದಾರೆ.
ಗುರುವಾರ ಈ ಸಂಬಂಧ ಅಬುಧಾಬಿಯಲ್ಲಿ ತೈಲೋತ್ಪಾದಕ ರಾಷ್ಟ್ರಗಳ ಸಭೆ ನಡೆಯಲಿದ್ದು, ಇದರಲ್ಲಿ ಅಬ್ದುಲ್ಲಜೀಜ್ ಕೂಡ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ತೈಲ ಉತ್ಪಾದನೆ ಕಡಿತದ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ತೈಲ ಉತ್ಪಾದನೆ ಕಡಿತಗೊಳಿಸುವುದರಿಂದ ಎಲ್ಲ ಒಪೆಕ್ ಸದಸ್ಯರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈಗಾಗಲೇ ಅಮೆರಿಕ ಮತ್ತು ಇರಾನ್ ಮಧ್ಯೆ ತೈಲ ಮಾರಾಟ ಕುರಿತಂತೆ ಸಂಘರ್ಷ ನಡೆಯುತ್ತಿದ್ದು, ಈ ಮಧ್ಯೆಯೇ ಒಪೆಕ್ ರಾಷ್ಟ್ರಗಳು ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದೂ ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್ ಘೋಷಣೆ
US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್
US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ
US Election: ಸೋಲಿನ ಬೆನ್ನಲ್ಲೇ ಭಾಷಣ ರದ್ದುಪಡಿಸಿದ ಕಮಲಾ ಹ್ಯಾರಿಸ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.