Tragedy: ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ… 25 ಮಂದಿ ಸಜೀವ ದಹನ
Team Udayavani, Oct 1, 2024, 2:03 PM IST
ಥಾಯ್ಲೆಂಡ್ : ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್‌ನ ಬ್ಯಾಂಕಾಕ್‌ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ಸು ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಲಡಾಖ್ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್ ವಶಕ್ಕೆ: ವಿಪಕ್ಷಗಳ ಆಕ್ರೋಶ
#BREAKING 🇹🇭A bus carrying dozens of primary school children crashed and caught fire just outside Bangkok, Thailand.
Sixteen children and three teachers reportedly escaped, but 22 pupils and three teachers are still unaccounted for, according to the transport minister.… pic.twitter.com/JoK7qiP0vs
— 凤凰欧洲 PhoenixCNE News (@PhoenixCNE_News) October 1, 2024
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.