ಪಾಕಿಸ್ಥಾನದ ನೂತನ ಪ್ರಧಾನಿಯಾಗಿ ಶಹಬಾಜ್ ಷರೀಫ್ ಆಯ್ಕೆ
Team Udayavani, Apr 11, 2022, 4:58 PM IST
ಇಸ್ಲಮಾಬಾದ್: ಪಾಕಿಸ್ಥಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಸಹೋದರ, ಪಾಕಿಸ್ಥಾನ ಮುಸ್ಲಿಂ ಲೀಗ್- ನವಾಜ್ ಪಕ್ಷದ ಮುಖಂಡ ಶಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.
ಸದನದ ನೂತನ ನಾಯಕರ ಆಯ್ಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿತ್ತು. ರವಿವಾರದ ಪ್ರಮುಖ ಬೆಳವಣಿಗೆಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ಥಾನ ಪೀಪಲ್ಸ್ ಪಾರ್ಟಿ ಮತ್ತುವಿಪಕ್ಷಗಳ ಇತರ ಮುಖಂಡರೆಲ್ಲ ಸೇರಿ ಶಹಬಾಜ್ ಷರೀಫ್ ಅವರನ್ನು ಮೈತ್ರಿಕೂಟದ ಮುಖಂಡರನ್ನಾಗಿ ಆಯ್ಕೆ ಮಾಡಿದ್ದಾರೆ.
ಶನಿವಾರ ರಾತ್ರಿ ಪಾಕಿಸ್ಥಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ಮತ ಮಂಡನೆ ಮತದಾನದಲ್ಲಿ ಇಮ್ರಾನ್ ಖಾನ್ ಸೋಲನುಭವಿಸಿದ್ದರು. ಹೀಗಾಗಿ ಅವರು ಪ್ರಧಾನಿ ಪಟ್ಟವನ್ನು ಕಳೆದುಕೊಂಡಿದ್ದರು.
ಇದನ್ನೂ ಓದಿ:ಬಿಜೆಪಿ ಬಂದ ನಂತರ ಕೊಲೆಗಳು ಹೆಚ್ಚಾಗಿವೆ, ತಲೆ ಒಡೆಯುವ ವಾತಾವರಣ ಸೃಷ್ಟಿಯಾಗಿದೆ: ಎಚ್ ಡಿಕೆ
“16 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಕೇಸ್ ಮತ್ತು 8 ಸಾವಿರ ಕೋಟಿ ರೂಪಾಯಿಯ ಇನ್ನೊಂದು ಭ್ರಷ್ಟಾಚಾರದ ಕೇಸ್ ಹೊಂದಿರುವ ವ್ಯಕ್ತಿ… ಆ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ದೇಶಕ್ಕೆ ಅದಕ್ಕಿಂತ ದೊಡ್ಡ ಅವಮಾನ ಇರಲಾರದು. ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಇಮ್ರಾನ್ ಖಾನ್ ಅವರು ಪಿಟಿಐ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಯಾರು ಈ ಶಹಬಾಜ್ ಷರೀಫ್: ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಸಹೋದರನಾಗಿರುವ ಶೆಹಬಾಜ್, ದೇಶದ ಹೊರಗೆ ಅಷ್ಟೊಂದು ಪ್ರಸಿದ್ದರಲ್ಲದಿದ್ದರೂ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದ ಪಾಕಿಸ್ಥಾನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ.
1999 ರಲ್ಲಿ ಪಾಕಿಸ್ತಾನದಲ್ಲಿ ಮಿಲಿಟರಿ ದಂಗೆಯ ನಂತರ ಶಹಬಾಜ್ ಜೈಲಿನಲ್ಲಿದ್ದರು, ಬಳಿಕ ಸೌದಿ ಅರೇಬಿಯಾಕ್ಕೆ ಗಡಿಪಾರಾಗಿದ್ದರು. 2007 ರಲ್ಲಿ ದೇಶಕ್ಕೆ ಮರಳಿದ ಅವರು, ಪನಾಮ ಪೇಪರ್ಸ್ ಲೀಕ್ ಸಂಬಂಧಿಸಿದ ಆಸ್ತಿಯನ್ನು ಮರೆಮಾಚುವ ಆರೋಪದ ಮೇಲೆ 2017 ರಲ್ಲಿ ನವಾಜ್ ಷರೀಫ್ ತಪ್ಪಿತಸ್ಥರೆಂದು ಸಾಬೀತಾದ ನಂತರ ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಿದರು.
ನವಾಜ್ ಷರೀಫ್‌ಗಿಂತ ಭಿನ್ನವಾಗಿ, ಶಹಬಾಜ್ ಅವರು ಪಾಕಿಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿದೇಶಿ ಮತ್ತು ರಕ್ಷಣಾ ನೀತಿಯನ್ನು ನಿಯಂತ್ರಿಸುವ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.