ಸ್ವಾತಂತ್ರ್ಯ ದಿನದಂದೇ ಕಾಬೂಲ್ನಲ್ಲಿ ಶೆಲ್ ದಾಳಿ
Team Udayavani, Aug 19, 2020, 4:05 AM IST
ಸಾಂದರ್ಭಿಕ ಚಿತ್ರ
ಕಾಬೂಲ್: ಆಫ್ಘನ್ ಸರಕಾರ ಮತ್ತು ತಾಲಿಬಾನ್ ನಡುವೆ ಮಾತುಕತೆಗೆ ಸಂಬಂಧಿಸಿ ಅನಿಶ್ಚಿತತೆ ಮುಂದುವರಿದಿರುವಂತೆಯೇ ಮಂಗಳವಾರ ಅಫ್ಘಾನಿಸ್ಥಾನದ ಸ್ವಾತಂತ್ರ್ಯದ ದಿನದಂದೇ ಕಾಬೂಲ್ ಮೇಲೆ ಶೆಲ್ ದಾಳಿ ನಡೆದಿದೆ. ಕಾಬೂಲ್ನ ಉತ್ತರ ಮತ್ತು ಪೂರ್ವ ಭಾಗದಲ್ಲಿ ಎರಡು ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಒಟ್ಟು 14 ಮೋರ್ಟರ್ ಶೆಲ್ಗಳನ್ನು ಸಿಡಿಸಿದ್ದಾರೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. ಮನೆಗಳು, ವಸತಿ ಸಂಕೀರ್ಣಗಳನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿ ನಡೆಸಲಾಗಿದೆ. ಈ ಪೈಕಿ ಒಂದು ಶೆಲ್, ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸರಕಾರದ ಹಿರಿಯ ಅಧಿಕಾರಿಗಳು ವಾಸವಿರುವ ವಜೀರ್ ಅಕ್ಬರ್ ಖಾನ್ ಪ್ರದೇಶದಲ್ಲಿ ಬಿದ್ದಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಉಗ್ರರ ವಶದಲ್ಲಿ ರುವ ಆಫ್ಘನ್ ಸೈನಿಕರನ್ನು ಬಿಡುಗಡೆ ಮಾಡದ ಹೊರತು ನಾವು 320 ತಾಲಿಬಾನ್ ಕೈದಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಸರಕಾರ ಖಡಕ್ಕಾಗಿ ತಿಳಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.