ಶಿಂಜೋ ಅಬೆ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ
Team Udayavani, Jul 8, 2022, 12:04 PM IST
ಟೋಕಿಯೋ: ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಲು ವೈದ್ಯರು ಶ್ರಮಿಸುತ್ತಿದ್ದಾರೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಹೇಳಿದ್ದಾರೆ.
ಜಪಾನ್ ಕಾಲಮಾನ ಪ್ರಕಾರ ಬೆಳಗ್ಗೆ 11.30ರ ಸುಮಾರಿಗೆ ಪಶ್ಚಿಮ ಜಪಾನ್ ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದ. ಗಾಯಗೊಂಡ ಶಿಂಜೋ ಅಬೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
“ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಈ ಕ್ಷಣದಲ್ಲಿ ಅವರು ಮಾಡಬಹುದಾದ ಎಲ್ಲವನ್ನೂ ಮಾಡುತ್ತಿದ್ದಾರೆ. ಅವರು ಇದರಿಂದ ಬದುಕುಳಿಯುತ್ತಾರೆ ಎಂದು ನಾನು ಭಾವಿಸುತ್ತೇನೆ, ಅದಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಿಶಿಡಾ ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.
ಇದನ್ನೂ ಓದಿ:ಬೊಮ್ಮಾಯಿ ಸರಕಾರ ಎಂದೇ ಹೇಳಬೇಕು..; ನಳಿನ್ ಕಟೀಲ್ ಪಾಠ ಮಾಡಿದ್ದೇಕೆ?
67ರ ಹರೆಯದ ಅಬೆ ಬೆಳಗ್ಗೆ 11:30ರ ಸುಮಾರಿಗೆ ನಾರಾದ ಬೀದಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ ಅಪರಿಚಿತ ವ್ಯಕ್ತಿಯೊಬ್ಬ ಶಾಟ್ ಗನ್‌ನಿಂದ ದಾಳಿ ನಡೆಸಿದ್ದಾನೆ ಎಂದು ಜಪಾನ್ ಟೈಮ್ಸ್ ವರದಿ ಮಾಡಿದೆ. ಶಿಂಜೋ ಅಬೆ ಅವರ ಎದೆಗೆ ಗುಂಡು ತಗುಲಿದೆ.
ಪಿಎಂ ಮೋದಿ ಟ್ವೀಟ್: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿಯಿಂದ ತೀವ್ರವಾಗಿ ನೊಂದಿದ್ದೇನೆ. ನಮ್ಮ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಮತ್ತು ಜಪಾನ್ ಜನರೊಂದಿಗೆ ಇವೆ” ಎಂದಿದ್ದಾರೆ.
Deeply distressed by the attack on my dear friend Abe Shinzo. Our thoughts and prayers are with him, his family, and the people of Japan.
— Narendra Modi (@narendramodi) July 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.