ಲಾಸ್ ವೆಗಾಸ್:ಒಂಟಿ ತೋಳದ ಗುಂಡಿನ ದಾಳಿ; 50 ಕ್ಕೂ ಹೆಚ್ಚು ಬಲಿ
Team Udayavani, Oct 2, 2017, 12:42 PM IST
ಲಾಸ್ ವೆಗಾಸ್: ಇಲ್ಲಿ ಭಾನುವಾರ ರಾತ್ರಿ ನಡೆಯುತ್ತಿದ್ದ ಸಂಗೀತ ಸಮಾರಂಭವೊಂದರಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ,200ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದ ಅಮೆರಿಕ ಬೆಚ್ಚಿ ಬಿದ್ದಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಮಂಡಾಲೇ ಬೇ ಕ್ಯಾಸಿನೋದಲ್ಲಿ ನಡೆಯುತ್ತಿದ್ದ ಓಪನ್ ಸ್ಟೇಜ್ ಮ್ಯೂಸಿಕ್ ಫೆಸ್ಟಿವಲ್ ಗುರಿಯಾಗಿರಿಸಿಕೊಂಡು ಪಕ್ಕದ ಕಟ್ಟಡದೊಳಗೆ ಹೊಂಚು ಹಾಕಿ ಕುಳಿತಿದ್ದ ವ್ಯಕ್ತಿಯೊಬ್ಬ ಮನ ಬಂದಂತೆ ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆ ಪೊಲೀಸರು, ಭದ್ರತಾ ಪಡೆಗಳು ಸಭಾಂಗಣವನ್ನು ಸುತ್ತುವರಿದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಹಲವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನು ಕೆಲವರು ಆಸ್ಪತ್ರೆಗಳಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಂಗೀತ ಸಮಾರಂಭ ನಡೆಯುತ್ತಿದ್ದಾಗ ಪಕ್ಕದ ಕಟ್ಟಡದ 32 ನೇ ಮಹಡಿಯಿಂದ ಗುಂಡಿನ ಮಳೆ
ಸುರಿದಿದ್ದು ಜನರು ದಿಕ್ಕಾಪಾಲಾಗಿ ಓಡಿದ್ದು, ಕೆಲವರು ಪ್ರಾಣ ಉಳಿಸಿಕೊಳ್ಳಲು ಇದ್ದಲ್ಲಿಯೆ ಅಂಗಾತ ಮಲಗಿದ್ದಾರೆ.
ಲಾಸ್ ವೆಗಾಸ್ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಕೆಲ ವಿಮಾನಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.
ಹತ್ಯೆಗೀಡಾದವರ ಪೈಕಿ ಇಬ್ಬರು ಪೊಲೀಸ್ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ದಾಳಿ ನಡೆಸಿದಾತ ಹತ್ಯೆ
ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ದಾಳಿ ನಡೆಸಿದ ದುಷ್ಕರ್ಮಿಯನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದು, ಆತನ ನಂಟು ಹೊಂದಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದು ಉಗ್ರರ ಕೃತ್ಯ ಎನ್ನುವ ಕುರಿತು ಇದುವರೆಗೆ ವರದಿಯಾಗಿಲ್ಲ.
ಹತ್ಯೆಗೀಡಾದ ದುಷ್ಕರ್ಮಿಯ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ, ಆದರೆ ಆತ ಉಗ್ರನೆ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ , ಉಗ್ರನಲ್ಲ ಎಂದಿದ್ದಾರೆ.
ಕೆನಡಾದಲ್ಲೂ ಒಂಟಿ ಉಗ್ರನ ದಾಳಿ
ಕೆನಡಾದ ಎಡಮೊಂಟನ್ ಪ್ರದೇಶದಲ್ಲಿ ಶನಿವಾರ ರಾತ್ರಿ ಸೋಮಾಲಿಯಾ ಮೂಲದ ನಿರಾಶ್ರಿತ ಉಗ್ರನೊಬ್ಬ ದಾಳಿ ನಡೆಸಿದ್ದು, ಟ್ರಕ್‌ವೊಂದರಲ್ಲಿ ಬಂದು ಪೊಲೀಸರಿಗೆ ಇರಿದಿದ್ದು, ಆ ಬಳಿಕ ಪಾದಾಚಾರಿಗಳ ಮೇಲೆ ವಾಹನ ಹರಿಸಿದ್ದಾನೆ. ಘಟನೆಯಲ್ಲಿ ಪೊಲೀಸ್ ಸೇರಿ ನಾಲ್ವರು ಗಾಯಗೊಂಡಿದ್ದು , ಪ್ರಾಣ ಹಾನಿ ಸಂಭವಿಸಿಲ್ಲ. ಉಗ್ರನನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.