ಬಾಂಗ್ಲಾದಲ್ಲೂ ಶ್ರದ್ಧಾ ಮಾದರಿ ಹತ್ಯೆl ಕತ್ತು ಹಿಸುಕಿ ಕೊಲೆ ಮಾಡಿದ, ಕೈ ತುಂಡರಿಸಿ ಚರಂಡಿಗೆ ಎಸೆದ
Team Udayavani, Nov 19, 2022, 6:40 AM IST
ಢಾಕಾ/ಲಕ್ನೋ: ಹೊಸದಿಲ್ಲಿಯಲ್ಲಿ ಶ್ರದ್ಧಾ ವಾಕರ್ ಎಂಬಾಕೆಯನ್ನು 35 ತುಂಡು ಮಾಡಿ ಹತ್ಯೆ ಮಾಡಿದ ಪ್ರಕರಣ ಹಸುರಾಗಿ ಇರುವಾಗಲೇ ಅದೇ ಮಾದರಿಯ ಪ್ರಕರಣ ಬಾಂಗ್ಲಾದೇಶದಲ್ಲಿ ನಡೆದಿದೆ. ನ.6ರಂದು ಕವಿತಾ ರಾಣಿ ಎಂಬ ಹಿಂದೂ ಸಮುದಾಯಕ್ಕೆ ಸೇರಿದ ಯುವತಿಯನ್ನು ಅಬು ಬಕ್ ಎಂಬಾತ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಮತ್ತು ಆಕೆಯ ದೇಹವನ್ನು ತುಂಡು ತುಂಡು ಮಾಡಿದ್ದಾನೆ. ಇಂಥ ಕೃತ್ಯವನ್ನು ಎಸಗಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕುತೂಹಲಕಾರಿ ಅಂಶ ವೆಂದರೆ ಐದು ದಿನಗಳ ಹಿಂದಷ್ಟೇ ಅಬು ಬಕ್Åಗೆ ಕವಿತಾ ಪರಿಚಯವಾಗಿದ್ದಳು. ನ.6ರಂದು ಆತನ ಆಹ್ವಾನದ ಮೇರೆಗೆ ಕವಿತಾ ಮನೆಗೆ ತೆರಳಿದ್ದಳು. ಅಲ್ಲಿ ಆತನಿಗೂ ಕವಿತಾಗೂ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಂತಿಮವಾಗಿ ಆತ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅನಂತರ ರುಂಡವನ್ನು ಮುಂಡದಿಂದ ಬೇರ್ಪಡಿಸಿದ್ದಾನೆ. ಆಕೆಯ ಕೈಯ್ಯನ್ನು ಕಡಿದು ತುಂಡು ಮಾಡಿ ಚರಂಡಿಯಲ್ಲಿ ಎಸೆದು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ.
ಅಬು ಬಕ್ ಕೆಲಸಕ್ಕೆ ಬಾರದೇ ಇದ್ದುದರ ಬಗ್ಗೆ ಸಂಶಯಗೊಂಡು ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನ.7ರಂದು ಪೊಲೀಸರು ಶೋಧ ನಡೆಸಿದಾಗ ಆತ ಮತ್ತೂಬ್ಬ ಯುವತಿ ಸಪ್ನಾ ಎಂಬಾಕೆಯ ಜತೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಆತನ ಮನೆಗೆ ತೆರಳಿದ್ದ ಸಂದರ್ಭದಲ್ಲಿ ರುಂಡವಿಲ್ಲದ ದೇಹ ಬಾಕ್ಸ್ ಒಂದರಲ್ಲಿ ಪತ್ತೆಯಾಗಿತ್ತು.
ಗುಂಡು ಹಾರಿಸಿ ಬಂಧನ
ಕೆಲವು ದಿನಗಳ ಹಿಂದೆ ಮುಸ್ಲಿಂಗೆ ಮತಾಂತರವಾಗಲು ನಿರಾಕರಿಸಿದ್ದ ಹಿಂದೂ ಯುವತಿಯನ್ನು ಕಟ್ಟಡದಿಂದ ತಳ್ಳಿ ಸಾಯಿಸಿದ್ದ ಸುಫಿಯಾನ್ ಎಂಬಾತನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಕ್ನೋ ಸಮೀಪದ ಪೊಲೀಸರಿಗೂ ಸುಫಿಯಾನ್‌ಗೂ ಗುಂಡಿನ ಚಕಮಕಿ ನಡೆದಿದೆ. ಆತನ ಬಗ್ಗೆ ಸುಳಿವು ಸಿಕ್ಕ ಪೊಲೀಸರ ತಂಡ ಲಕ್ನೋದ ದುಬಗ್ಗಾ ಎಂಬಲ್ಲಿ ಶೋಧ ನಡೆಸುತ್ತಿತ್ತು. ಆಗ ಆತ ಪೊಲೀಸರತ್ತ ಗುಂಡು ಹಾರಿಸಿದ್ದಾನೆ. ಪೊಲೀಸರು ಪ್ರತೀಯಾಗಿ ಗುಂಡು ಹಾರಿಸಿದಾಗ ಬಲದ ಕಾಲಿಗೆ ಗುಂಡು ತಾಗಿ, ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.