ಕೋವಿಡ್ 19 ಕಳವಳ: ಎಪ್ರಿಲ್ 7 ರಿಂದ ಒಂದು ತಿಂಗಳು ಸಿಂಗಾಪುರ ಲಾಕ್ ಡೌನ್
Team Udayavani, Apr 4, 2020, 3:16 PM IST
ಸಿಂಗಾಪುರ: ಕೋವಿಡ್ 19 ವೈರಸ್ ಮತ್ತಷ್ಟು ವ್ಯಾಪಿಸದಂತೆ ತಡೆಯಲು ಏ.7ರಿಂದ ಒಂದು ತಿಂಗಳ ಕಾಲ ಲಾಕ್ ಡೌನ್ ಮಾಡಲು ಸಿಂಗಾಪುರ ಸರಕಾರ ನಿರ್ಧರಿಸಿದೆ. ಶಿಕ್ಷಣ ಸಂಸ್ಥೆಗಳು, ಕಚೇರಿಗಳು ಬಂದ್ ಆಗಿರಲಿವೆ. ಅಗತ್ಯ ವಸ್ತುಗಳು ಮತ್ತು ಸೇವೆಗಳನ್ನು ಯಥಾಸ್ಥಿತಿಯಲ್ಲಿ ಇರಿಸಲಾಗುತ್ತದೆ ಎಂದು ಶುಕ್ರವಾರ ಪ್ರಧಾನಿ ಲೀ ಹಿಸೆನ್ ಲೂಂಗ್ ತಿಳಿಸಿದ್ದಾರೆ.
‘ಸದ್ಯ ಇರುವ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಭಾರಿ ಸವಾಲು ಇರುವಂತೆ ಕಾಣುತ್ತಿದೆ. ಜತೆಗೆ ಕೈಮೀರುವ ಹಂತ ಕಾಣುತ್ತಿದೆ. ಹೀಗಾಗಿ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಮನೆಯಿಂದ ಹೊರಗೆ ಬರಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ. ಭಾನುವಾರದಿಂದ ಎಲ್ಲಾ ನಿವಾಸಿಗಳಿಗೂ ಮರು ಬಳಕೆ ಮಾಡಬಹುದಾದ ಮಾಸ್ಕ್ ಗಳನ್ನು ಸರ್ಕಾರದ ವತಿಯಿಂದಲೇ ನೀಡಲಾಗುತ್ತದೆ ಎಂದೂ ಪ್ರಧಾನಿ ಲೀ ಹಿಸೆನ್ ಲೂಂಗ್ ಹೇಳಿದ್ದಾರೆ.
ಸಿಂಗಾಪುರದಲ್ಲಿ ಎರಡು ವಾರಗಳ ಅವಧಿಯಲ್ಲಿ ಕೋರೊನಾ ಸೋಂಕು ವ್ಯಾಪಕವಾಗಿ ಹರಡಿದೆ. ಗುರುವಾರದವರೆಗಿನ ಮಾಹಿತಿಯಂತೆ 1,049 ಸೋಂಕಿನ ಪ್ರಕರಣಗಳು ಖಚಿತಪಟ್ಟಿವೆ ಮತ್ತು ಈ ಸೋಂಕಿಗೆ ಈಗಾಗಲೇ ದೇಶಾದ್ಯಂತ ಐವರು ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.