ಆತಂಕದ ಸ್ವಾತಂತ್ರ್ಯ: ಮತ್ತೆ ಉ.ಕೊರಿಯಾ ಕ್ಷಿಪಣಿ ಪರೀಕ್ಷೆ?
Team Udayavani, Sep 9, 2017, 10:50 AM IST
ಸಿಯೋಲ್: ‘ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕೊರಿಯಾ’ ಸ್ಥಾಪನೆಯಾಗಿ 69 ವಸಂತಗಳು ಸಂದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾ ಮತ್ತೆ ಪರಮಾಣು ಹಾಗೂ ಕ್ಷಿಪಣಿ ಪರೀಕ್ಷೆ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ನಡೆಸಲು ಹೊರಟಿರುವುದು ಜಗತ್ತಿನಾದ್ಯಂತ ಸುದ್ದಿಯಾಗಿದೆ. ದಕ್ಷಿಣ ಕೊರಿಯಾ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಸೆ.9ರಂದು ಈ ಪರೀಕ್ಷೆ ನಡೆಯಲಿದೆ.
ಕಳೆದ ವಾರವಷ್ಟೇ ಹೈಡ್ರೋಜನ್ ಬಾಂಬ್ ಪರೀಕ್ಷಿಸುವ ಮೂಲಕ ಅಂತಾರಾಷ್ಟ್ರೀಯ ಸಮುದಾಯದಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದ ಉತ್ತರ ಕೊರಿಯಾ ಇದೀಗ ಮತ್ತೂಂದು ದುಸ್ಸಾಹಸಕ್ಕೆ ಮುಂದಾಗಿರುವುದು ಅಚ್ಚರಿ ಮೂಡಿಸಿದೆ. ವಾರಾಂತ್ಯಕ್ಕೆಲ್ಲ ಪರೀಕ್ಷಿಸಲು ಎಲ್ಲ ರೀತಿಯಿಂದ ಸಿದ್ಧತಾ ಕಾರ್ಯ ನಡೆದಿದೆ ಎಂದು ದಕ್ಷಿಣ ಕೊರಿಯಾ ಸರಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗುರುವಾರ ಸ್ವತಃ ದಕ್ಷಿಣ ಕೊರಿಯಾದ ಪ್ರಧಾನಿ ಲೀ ನಾಕ್-ಯಾನ್ ಪ್ರತಿಕ್ರಿಯಿಸಿ, ಇನ್ನೊಂದು ಕ್ಷಿಪಣಿ ಪರೀಕ್ಷೆಗೆ ತಯಾರಿ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಈ ಬೆನ್ನಿಗೇ ಇದೀಗ ಅಧಿಕಾರಿಗಳು ಇದನ್ನು ಖಚಿತಪಡಿಸಿದ್ದಾರೆ ಎನ್ನಲಾಗಿದೆ.
ಮಿಲಿಟರಿ ಕ್ರಮ ತಳ್ಳಿಹಾಕದ ಟ್ರಂಪ್
ಇವೆಲ್ಲದರ ನಡುವೆಯೇ ಉತ್ತರ ಕೊರಿಯಾ ವಿರುದ್ಧ ಕೆಂಡಾಮಂಡಲ ಆಗಿರುವ ಅಮೆರಿಕ ಯಾವುದೇ ಕ್ಷಣದಲ್ಲಿ ಉತ್ತರ ಕೊರಿಯಾವನ್ನು ಹೆಡೆಮುರಿ ಕಟ್ಟಿದರೆ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ಕ್ರಮಕ್ಕೆ ಮುಂದಾಗುವ ಚಿಂತನೆಯಿಂದ ಇನ್ನೂ ಹಿಂದೆ ಸರಿದಿಲ್ಲ. ಆದರೆ ಅನಿವಾರ್ಯ ಎಂದಾದಲ್ಲಿ ಯಾವ ಕ್ಷಣದಲ್ಲಿಯೂ ದಾಳಿಗೆ ಸೂಚಿಸಬಹುದು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.