ಲಂಕಾದಲ್ಲಿ ಬುರ್ಖಾ ನಿಷೇಧ
Team Udayavani, Apr 30, 2019, 6:00 AM IST
ಕೊಲಂಬೋ: ಈಸ್ಟರ್ ಸಂಡೇ ದುರಂತದ ಬೆನ್ನಲ್ಲೇ ಶ್ರೀಲಂಕಾದ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೂಪದ ಬುರ್ಖಾ ಧರಿಸುವುದನ್ನು ಸರಕಾರ ನಿಷೇಧಿಸಿದ್ದು, ಸೋಮವಾರದಿಂದಲೇ ಜಾರಿಗೆ ಬಂದಿದೆ.
ಮುಖದ ಗುರುತನ್ನು ಮರೆಮಾಚುವ ಯಾವುದೇ ಬಟ್ಟೆಯನ್ನು ಧರಿಸುವುದೂ ನಿಷೇಧವಾಗಿದೆ. ದೇಶದ ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಹೇಳಿದ್ದಾರೆ. ಈಸ್ಟರ್ ರವಿವಾರದ ಸರಣಿ ಆತ್ಮಾಹುತಿ ದಾಳಿಯ ಬೆನ್ನಲ್ಲೇ ಬುರ್ಖಾ ನಿಷೇಧದ ಕೋರಿಕೆ ಮುನ್ನೆಲೆಗೆ ಬಂದಿತ್ತು. ಈಗ ಸಿರಿಸೇನ ತನ್ನ ತುರ್ತು ಅಧಿಕಾರವನ್ನು ಬಳಸಿ ಬುರ್ಖಾ ನಿಷೇಧ ಜಾರಿಗೊಳಿಸಿದ್ದಾರೆ. ಆದರೆ ಪ್ರಕಟನೆಯಲ್ಲಿ ನಿಖಾಬ್ ಅಥವಾ ಬುರ್ಖಾ ಎಂಬ ಪದವನ್ನು ಬಳಸಿಲ್ಲ. ಇಂಥ ಸಂದರ್ಭದಲ್ಲಿ ಮುಖದ ಗುರುತು ಪತ್ತೆ ದೇಶದ ಭದ್ರತೆಯ ವಿಚಾರದಲ್ಲಿ ಮುಖ್ಯ ಎಂದಿದ್ದಾರೆ.
ಇದೇ ವೇಳೆ ಜೆಹಾದ್ ಮತ್ತು ತೀವ್ರಗಾಮಿ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಲು ಹೊಸ ಕಠಿನ ಕಾನೂನುಗಳನ್ನು ಸರಕಾರ ಜಾರಿಗೆ ತರಲಿದೆ ಎಂದು ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹೇಳಿದ್ದಾರೆ. ಉಗ್ರ ನಿರ್ಮೂಲನೆಯ ಹೊಸ ಕಾನೂನನ್ನು ಜಾರಿಗೆ ತಂದಿದ್ದರೆ ದುರ್ಘಟನೆಯನ್ನು ತಡೆಯಬಹುದಾಗಿತ್ತು. ಈ ಕಾನೂನಿನ ಪ್ರಕಾರ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯ ಜತೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಯಾವುದೇ ವ್ಯಕ್ತಿಯನ್ನು ಬಂಧಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.