Afghanistan: ಬೆಚ್ಚಿಬೀಳಿಸಿದ ಪ್ರಬಲ ಭೂಕಂಪನ; ಎರಡು ಸಾವಿರ ಮೀರಿದ ಸಾವಿನ ಸಂಖ್ಯೆ
Team Udayavani, Oct 8, 2023, 12:08 PM IST
ಕಾಬೂಲ್: ಪಶ್ಚಿಮ ಅಫ್ಘಾನಿಸ್ತಾನವನ್ನು ಬೆಚ್ಚಿಬೀಳಿಸಿದ ಪ್ರಬಲ ಭೂಕಂಪದಲ್ಲಿ ಅಸ ನೀಗಿದವರ ಸಂಖ್ಯೆ 2,000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ಭಾನುವಾರ ಹೇಳಿದ್ದಾರೆ, ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.
ಶನಿವಾರದಂದು ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಪ್ರಬಲವಾದ 6.3 ತೀವ್ರತೆಯ ಭೂಕಂಪದ ನಂತರದ ಭೂಕಂಪನದಿಂದ ಮತ್ತೆ ಹಲವು ಜನರು ಸತ್ತಿದ್ದಾರೆ ಎಂದು ದೇಶದ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ತಿಳಿಸಿದೆ.
ದೇಶದ ಮಾಹಿತಿ ಮತ್ತು ಸಂಸ್ಕೃತಿ ಸಚಿವಾಲಯದ ವಕ್ತಾರ ಅಬ್ದುಲ್ ವಾಹಿದ್ ರಾಯನ್, ಹೆರಾತ್ ನಲ್ಲಿ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆಯು ಹೆಚ್ಚುತ್ತಿದೆ ಎಂದು ಹೇಳಿದರು. ಸುಮಾರು ಆರು ಗ್ರಾಮಗಳು ನಾಶವಾಗಿವೆ ಮತ್ತು ನೂರಾರು ನಾಗರಿಕರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ:Arrest of the accused: ವೃದ್ಧರ ಪ್ರಜ್ಞೆ ತಪ್ಪಿಸಿ ಸರ ಕದ್ದಿದ್ದ ಮಹಿಳೆ ಸೇರಿ ಇಬ್ಬರ ಬಂಧನ
465 ಮನೆಗಳು ನಾಶವಾದ ವರದಿಯಾಗಿದೆ ಮತ್ತು ಇನ್ನೂ 135 ಹಾನಿಯಾಗಿದೆ ಎಂದು ವರದಿಯಾಗಿದೆ.
ವಿಪತ್ತು ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಅಬ್ದುಲ್ಲಾ ಜಾನ್ ಅವರು ಹೆರಾತ್ ಪ್ರಾಂತ್ಯದ ಝೆಂಡಾ ಜಾನ್ ಜಿಲ್ಲೆಯ ನಾಲ್ಕು ಗ್ರಾಮಗಳು ಭೂಕಂಪ ಮತ್ತು ನಂತರದ ಆಘಾತಗಳ ತೀವ್ರತೆಯನ್ನು ಅನುಭವಿಸಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.