ಮುಂಬೈ ದಾಳಿ ಸಂಚುಕೋರ ರಾಣಾ ಹಸ್ತಾಂತರ ಸಾಧ್ಯತೆ
Team Udayavani, Jan 15, 2019, 12:35 AM IST
ವಾಷಿಂಗ್ಟನ್: ಮುಂಬಯಿ ದಾಳಿ ಸಂಚುಕೋರರಲ್ಲೊಬ್ಬನಾದ ಉಗ್ರ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈತ ಅಮೆರಿಕದಲ್ಲಿ 14 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದು, 2021ರಲ್ಲಿ ಈತನ ಶಿಕ್ಷೆ ಅವಧಿ ಮುಗಿಯಲಿದೆ. ಈತನ ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗಿದೆ. ಪಾಕ್ ಮೂಲದ ಕೆನಡಾ ಪ್ರಜೆ ರಾಣಾ ನನ್ನು 2009ರಲ್ಲಿ ಬಂಧಿಸಲಾಗಿತ್ತು. ಈತ ಲಷ್ಕರ್ ಎ ತೋಯ್ಬಾ ಉಗ್ರರ ಜತೆ ಸಂಪರ್ಕದಲ್ಲಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು. ಇದೇ ವೇಳೆ ಮುಂಬೈ ದಾಳಿ ಸಂಚಿನಲ್ಲಿ ಪಾತ್ರ ವಹಿಸಿದ್ದ ಇನ್ನೊಬ್ಬ ಉಗ್ರ ಡೇವಿಡ್ ಹೆಡ್ಲಿಯನ್ನೂ ಭಾರತಕ್ಕೆ ಹಸ್ತಾಂತರಿಸ ಬೇಕೆಂದು ಭಾರತೀಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಡೊನಾಲ್ಡ್ ಟ್ರಂಪ್ ಸರಕಾರವು ಈ ವಿಚಾರದಲ್ಲಿ ಭಾರತಕ್ಕೆ ಸಂಪೂರ್ಣ ನೆರವು ನೀಡುತ್ತಿದೆ. ಈಗಾಗಲೇ ಮುಂಬೈ ದಾಳಿ ವಿಚಾರದಲ್ಲಿ ಈತ ಶಿಕ್ಷೆ ಅನುಭವಿಸುತ್ತಿರುವುದರಿಂದ ಡಿಫೆನ್ಸ್ ಕಾಲೇಜು, ಚಾಬಾದ್ ಹೌಸ್ ಸ್ಫೋಟ ಸಂಚು ಪ್ರಕರಣ ದಲ್ಲಿ ಈತನ ಹಸ್ತಾಂತರಕ್ಕೆ ಅಮೆರಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.