ಅಫ್ಗಾನಿಸ್ತಾನ : ಕಾಬೂಲ್ ನನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ : ತಾಲಿಬಾನ್
Team Udayavani, Aug 15, 2021, 6:14 PM IST
ಕಾಬೂಲ್ : ಅಫ್ಗಾನ್ ಮೇಲೆ ತಾಲಿಬಾನ್ ಉಗ್ರ ಪಡೆಗಳ ದಾಳಿ ಮುಂದುವರಿದಿದ್ದು, ಅಫ್ಗಾನಿಸ್ತಾನದ ಮೇಲೆ ಬಿಗಿ ಹಿಡಿತ ಸಾಧಿಸಲು ಕಾಬೂಲ್ ನಗರದ ಹೊರವಲಕ್ಕೆ ಮುತ್ತಿಗೆ ಹಾಕಿದೆ.
ಅಫ್ಗಾನಿಸ್ತಾನದ ರಾಜಧಾನಿಯನ್ನು ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ. ‘ಯಾವುದೇ ವ್ಯಕ್ತಿಯ ಜೀವ, ಆಸ್ತಿ ಮತ್ತು ಘನತೆಗೆ ಧಕ್ಕೆ ತರುವುದಿಲ್ಲ. ಕಾಬೂಲ್ ನಾಗರಿಕರ ಜೀವಕ್ಕೂ ಯಾವುದೇ ರೀತಿಯ ಅಪಾಯವಿಲ್ಲ’ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ.
ಈ ನಡುವೆ ಪ್ರತಿಕ್ರಿಯಿಸಿದ ಅಫ್ಗಾನ್ ನಅಧಿಕಾರಿಯೊಬ್ಬರು, ರಾಸಮೀಪದ ಕಲಕನ್, ಖರಾಬಾಗ್ ಮತ್ತು ಪಘಮಾನ್ ಜಿಲ್ಲೆಗಳಲ್ಲಿ ತಾಲಿಬಾನ್ ಉಗ್ರರು ಬೀಡುಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಸಚಿವ ಈಶ್ವರಪ್ಪ ಮತ್ತು ಸಿ.ಟಿ.ರವಿ ನಾಲಾಯಕರು : ಧ್ರುವನಾರಾಯಣ್
ಸಹಸ್ರಾರು ನಾಗರಿಕರು ಕಾಬೂಲ್‌ನ ಉದ್ಯಾನಗಳಲ್ಲಿ ಮತ್ತು ಬಯಲು ಪ್ರದೇಶದಲ್ಲಿ ಆಶ್ರಯ ಪಡೆದಿದ್ದಾರೆ. ಎಟಿಎಂಗಳು ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ತಾವು ಉಳಿತಾಯ ಮಾಡಿದ ಹಣ ವಾಪಸ್ ಪಡೆಯಲು ನೂರಾರು ಮಂದಿ ಖಾಸಗಿ ಬ್ಯಾಂಕ್‌ಗಳ ಮುಂದೆ ಸೇರಿದ್ದಾರೆ.
ಆತಂಕಗೊಂಡ ನೌಕರರು ಸರ್ಕಾರಿ ಕಚೇರಿಗಳಿಂದ ಪರಾರಿಯಾಗಿದ್ದಾರೆ.ಹಲವೆಡೆ ಬಂದೂಕಿನ ಗುಂಡುಗಳನ್ನು ಸಿಡಿಸಿರುವ ಶಬ್ದಗಳು ಕೇಳಿ ಬಂದಿದೆ. ಆದರೆ, ದಾಳಿಯನ್ನು ಅಫ್ಗನ್ ಅಧ್ಯಕ್ಷರ ಕಚೇರಿ ನಿರಾಕರಿಸಿದೆ ಎಂದು ವರದಿಯಾಗಿದೆ.
ಇನ್ನು, ‘ಅಂತರರಾಷ್ಟ್ರೀಯ ಪಡೆಗಳ ನೆರವಿನೊಂದಿಗೆ ಭದ್ರತಾ ಪಡೆಗಳು ಕಾಬೂಲ್ ನಗರವನ್ನು ರಕ್ಷಣೆಯ ಕಾರ್ಯದಲ್ಲಿ ತೊಡಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ತಿಳಿದು ಬಂದಿದೆ.
ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಹೆಲಿಕಾಪ್ಟರ್ ಗಳು ಬಂದಿಳಿದಿದ್ದು, ಶಸ್ತ್ರಾಸ್ತ್ರಗಳನ್ನು ಹೊಂದಿರುವ ಯುಎಚ್–60 ಹೆಲಿಕಾಪ್ಟರ್ ಗಳು ಇವಾಗಿವೆ. ಅಮೆರಿಕ ರಾಯಭಾರಿ ಕಚೇರಿ ಸಮೀಪ ಸಣ್ಣದಾಗಿ ಹೊಗೆ ಕಾಣಿಸಿಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಇಬ್ಬರು ಮಿಲಿಟರಿ ಅಧಿಕಾರಿಗಳು, ಹಲವು ಸೂಕ್ಷ್ಮ ದಾಖಲೆಗಳಿಗೆ ರಾಜತಾಂತ್ರಿಕರು ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಶಸ್ತ್ರಧಾರಿ ಸೈನಿಕರ ಜೊತೆ ‘ಅಪ್ಪು’ |’ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’ ಎಂದ ‘ಜೇಮ್ಸ್’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.