Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
ದೇಶದ್ರೋಹ ಕೇಸ್: ಏರ್‌ಪೋರ್ಟ್‌ನಲ್ಲಿ ವಶಕ್ಕೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ?
Team Udayavani, Nov 26, 2024, 7:50 AM IST
ಢಾಕಾ: ಬಾಂಗ್ಲಾದೇಶದಲ್ಲಿನ ಪ್ರಮುಖ ಹಿಂದೂ ನಾಯಕ, ಇಸ್ಕಾನ್‌ನ ಸಾಧು ಕೃಷ್ಣದಾಸ್ ಪ್ರಭು ಅವರನ್ನು ಬಾಂಗ್ಲಾದ ಮಧ್ಯಾಂತರ ಸರಕಾರ ಬಂಧಿಸಿದೆ.
ಇವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದ್ದು, ಢಾಕಾ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೃಷ್ಣದಾಸ್ ಅವರು ಬೃಹತ್ ಪ್ರತಿಭಟನೆಯನ್ನು ಇತ್ತೀಚೆಗೆ ನಡೆಸಿದ್ದರು. ಈ ವೇಳೆ ಬಾಂಗ್ಲಾದ ಮಧ್ಯಾಂತರ ಸರಕಾರದ ವಿರುದ್ಧ ಮಾತನಾಡಿದ್ದಲ್ಲದೇ ಕೇಸರಿ ಧ್ವಜವನ್ನು ಹಾರಿಸಿದ್ದರು. ಹೀಗಾಗಿ ಕೃಷ್ಣದಾಸ್ ಹಾಗೂ ಇತರ 18 ಮಂದಿ ವಿರುದ್ಧ ಬಾಂಗ್ಲಾ ಸರಕಾರ ದೇಶದ್ರೋಹದ ಪ್ರಕರಣ ದಾಖಲಿಸಿತ್ತು.
ಶೇಖ್ ಹಸೀನಾ ಪದಚ್ಯುತಿಯ ಬಳಿಕ ಬಾಂಗ್ಲಾದಲ್ಲಿ ಹಿಂಸಾಚಾರ ಹೆಚ್ಚಳವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿ ಹಲವು ದಾಳಿ ನಡೆದಿವೆ. ಕೆಲವು ದಿನಗಳ ಹಿಂದೆ ಇಸ್ಕಾನ್ ಸಾಧುಗಳನ್ನು ದೇಶಬಿಟ್ಟು ಓಡಿಸಿ ಇಲ್ಲದಿದ್ದರೆ ಅವರನ್ನೆಲ್ಲ ಹತ್ಯೆ ಮಾಡುತ್ತೇವೆ ಎಂದು ಉಗ್ರ ಸಂಘಟನೆಯೊಂದು ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಸರಕಾರ ಕೃಷ್ಣದಾಸ್‌ರನ್ನು ಬಂಧಿಸಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.