ಎಂಟು ಮುಸ್ಲಿಂ ರಾಷ್ಟ್ರಗಳಿಗೆ ಹೊಸ ನಿರ್ಬಂಧ
Team Udayavani, Mar 22, 2017, 3:50 AM IST
ವಾಷಿಂಗ್ಟನ್: ಎಂಟು ಮುಸ್ಲಿಂ ರಾಷ್ಟ್ರಗಳನ್ನು ಗುರಿಯಾಗಿರಿಸಿ ಕೊಂಡು ಹೊಸ ವಲಸೆ ನೀತಿ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ದುಬೈ ಮತ್ತಿತರ ರಾಷ್ಟ್ರಗಳಿಂದ ಅಮೆರಿಕಕ್ಕೆ ಬರುವ ವಿಮಾನದಲ್ಲಿ ಕ್ಯಾಮರಾ, ಲ್ಯಾಪ್‌ಟಾಪ್, ಐಪ್ಯಾಡ್, ಕಿಂಡಲ್ ಮತ್ತು ಇತರ ಇಲೆಕ್ಟ್ರಾನಿಕ್ ವಸ್ತುಗಳನ್ನು ತರುವುದರ ಮೇಲೆ ನಿಷೇಧ ಹೇರಿದೆ. ಯುಕೆ ಕೂಡ ಈ ನಿಷೇಧ ಹೇರಿದೆ. ರಾಷ್ಟ್ರಗಳಿಂದ ಬರುವ ಪ್ರಯಾಣಿಕರಲ್ಲಿ ಇಂಥ ವಸ್ತುಗಳು ಇವೆಯೇ ಎಂಬುದರ ಬಗ್ಗೆ ಕರಾರುವಾಕ್ಕಾಗಿ ಪರಿಶೀಲನೆ ಆಗಬೇಕೆಂಬ ಕಟ್ಟಾಜ್ಞೆ ಹೊರಡಿಸಲಾಗಿದೆ. ಈ ಆದೇಶದಿಂದಾಗಿ ದುಬೈ, ಇಸ್ತಾಂಬುಲ್ ಸೇರಿದಂತೆ 10 ಏರ್‌ಪೋರ್ಟ್‌ಗಳಿಂದ ಬರುವ 50ಕ್ಕೂ ಹೆಚ್ಚು ವಿಮಾನಗಳಿಗೆ ತೊಂದರೆಯಾಗಲಿದೆ. ಈ ಆದೇಶ ಜಾರಿಗೆ ತರಲು 96 ಗಂಟೆಗಳ ಅವಧಿ ನೀಡಲಾಗಿದೆ.
ಸುಲಭವಾಗಿ ಸಾಗಿಸುವ ಇಲೆಕ್ಟಾನಿಕ್ ವಸ್ತುಗಳ ಮೂಲಕ ಸ್ಫೋಟಕಗಳನ್ನು ತರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಈ ಕಠಿಣ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದು ಅಮೆರಿಕದ ಗೃಹ ಇಲಾಖೆ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.