ಟ್ರಂಪ್ಗೂ ಸದ್ದಾಂಗೆ ಬಂದ ಗತಿ: ಇರಾನ್
Team Udayavani, Sep 23, 2018, 6:00 AM IST
ದುಬೈ: ಇರಾನ್-ಅಮೆರಿಕ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಇರಾಕ್ ಸರ್ವಾಧಿಕಾರಿ ಸದ್ದಾಂ ಹುಸೇನ್ನನ್ನು ಉರುಳಿಸಿದಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರನ್ನೂ ಉರುಳಿಸುತ್ತೇವೆ ಎಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿ ಹೇಳಿದ್ದಾರೆ. ಅಲ್ಲದೆ ಇರಾನ್ ಯಾವುದೇ ಕಾರಣಕ್ಕೂ ತನ್ನ ರಕ್ಷಣಾ ತಂತ್ರಗಳನ್ನು ಬಳಸದೇ ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.
ಮೇ ತಿಂಗಳಲ್ಲಿ ಉಭಯ ದೇಶಗಳ ಮಧ್ಯದ ಅಣ್ವಸ್ತ್ರ ಒಪ್ಪಂದವನ್ನು ಅಮೆರಿಕ ರದ್ದುಗೊಳಿಸಿ, ನಿಷೇಧ ಹೇರಿದ್ದರಿಂದ ಸಂಘರ್ಷ ಆರಂಭವಾಗಿತ್ತು. ನ.4ರಿಂದ ಮತ್ತೂಂದು ಸುತ್ತಿನ ನಿಷೇಧವೂ ಜಾರಿಗೆ ಬರಲಿದೆ. ತನ್ನ ಸಾಮರ್ಥ್ಯ ಪ್ರದರ್ಶನಕ್ಕಾಗಿ ಟೆಹ್ರಾನ್ನಲ್ಲಿ ಕೆಲ ದಿನಗಳ ಹಿಂದೆ ನೌಕಾ ಪಡೆಯ ಸಮರಾಭ್ಯಾಸ ನಡೆಸಿದೆ. ಅಲ್ಲದೆ 600ಕ್ಕೂ ಹೆಚ್ಚು ತೈಲ ನೌಕೆಗಳ ಪ್ರದರ್ಶನವನ್ನೂ ಇರಾನ್ ನಡೆಸಿದೆ. ಇಲ್ಲಿಂದ ಅಮೆರಿಕ್ಕೆ ಪೂರೈಕೆಯಾಗುವ ಕಚ್ಚಾ ತೈಲ ವನ್ನು ಇರಾನ್ ತಡೆವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.