ಅಫ್ಘಾನ್ ನಲ್ಲಿ ಕದನ ವಿರಾಮ: ಶೀಘ್ರದಲ್ಲಿ ತಾಲಿಬಾನ್ ಮುಖಂಡರನ್ನು ಭೇಟಿಯಾಗಲಿರುವ ಟ್ರಂಪ್
Team Udayavani, Mar 1, 2020, 9:20 AM IST
ವಾಷಿಂಗ್ಟನ್: ಅಫ್ಘಾನಿಸ್ಥಾನದಲ್ಲಿ ಹೊಸದಾಗಿ ಏರ್ಪಟ್ಟಿರುವ ಅಮೆರಿಕಾ ಹಾಗೂ ತಾಲಿಬಾನ್ ಬಂಡುಕೋರರ ನಡುವಿನ ಕದನ ವಿರಾಮ ಒಪ್ಪಂದವನ್ನು ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ವ್ಯೆಯಕ್ತಿಕವಾಗಿ ತಾಲಿಬಾನ್ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಶ್ವೇತಭವನದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಒಪ್ಪಂದದ ನಂತರ ಅಫ್ಘಾನಿಸ್ಥಾನದಲ್ಲಿ ಸ್ಥಿರತೆ ಕಾಪಾಡಲು ಎಲ್ಲರೂ ಸಹಕರಿಸಬೇಕು. ಹಾಗೂ ಮುಂದಿನ 14 ತಿಂಗಳುಗಳಲ್ಲಿ ಅಮೆರಿಕಾ ಸೇನೆ ಹಂತಹಂತವಾಗಿ ಅಫ್ಘಾನ್ ನಿಂದ ವಾಪಾಸ್ ಹೋಗಲಿದೆ ಎಂದು ತಿಳಿಸಿದರು.
ಈ ಒಪ್ಪಂದದ ಮೂಲಕ 19 ವರ್ಷಗಳ ಸುದೀರ್ಘ ಯುದ್ಧಕ್ಕೆ ತೆರಬಿದ್ದಿದೆ. ತಾಲಿಬಾನ್ ಮುಖಂಡರೊಂದಿಗೆ ಮಾತುಕತೆ ಜಟಿಲವಾಗುತ್ತದೆ ಎಂದು ಹಲವರು ಭಾವಿಸಿದ್ದರು. ಆದರೆ ಯುದ್ದದಿಂದ ಪ್ರತಿಯೊಬ್ಬರು ಬೇಸೆತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆ ಮಾತುಕತೆಗಳು ಯಶಸ್ವಿಯಾಗಲಿವೆ ಎಂದು ಭರವಸೆ ಅವರು ವ್ಯಕ್ತಪಡಿಸಿದ್ದಾರೆ.
ಅಫ್ಘಾನ್ ನೆಲದಲ್ಲಿ ರಕ್ತಪಾತಕ್ಕೆ ಕಾರಣವಾಗಿದ್ದ ತಾಲಿಬಾನ್ ಉಗ್ರರು ಮತ್ತು ಅವರನ್ನು ಹಿಮ್ಮೆಟ್ಟಿಸಲು ಅಲ್ಲಿ 2001ರಿಂದ ಕದನ ನಿರತವಾಗಿದ್ದ ಅಮೆರಿಕ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿದೆ. ಮುಂದಿನ 14 ತಿಂಗಳುಗಳಲ್ಲಿ ಅಮೆರಿಕ ಸೇನೆ ಹಂತ-ಹಂತವಾಗಿ ವಾಪಸ್ ಹೋಗಲಿದೆ.
President @realDonaldTrump provides an update on bringing troops home from Afghanistan: pic.twitter.com/wfeOSna7AY
— The White House (@WhiteHouse) February 29, 2020
ಕತಾರ್ ರಾಜಧಾನಿ ದೋಹಾದಲ್ಲಿರುವ ಶೆರಟಾನ್ ಹೊಟೇಲ್‌ನಲ್ಲಿ ಅಫ್ಘಾನಿಸ್ಥಾನದಲ್ಲಿರುವ ಅಮೆರಿಕದ ಪ್ರತಿನಿಧಿ ಝಲ್ಮಯ್ ಖಲೀಜಾದ್ ಹಾಗೂ ತಾಲಿಬಾನ್‌ನ ನಾಯಕರ ಪ್ರತಿನಿಧಿ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಸಹಿ ಹಾಕಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷ ಶಿಂಗ್ಲಾ ಸೇರಿ ಪಾಕಿಸ್ಥಾನ, ಇಂಡೋನೇಷ್ಯಾ, ಉಜ್ಬೇಕಿಸ್ಥಾನ, ತಜಕಿಸ್ಥಾನ ಸಹಿತ ಸುಮಾರು 30 ರಾಷ್ಟ್ರಗಳ ಪ್ರತಿನಿಧಿಗಳು ಹಾಗೂ ವಿಶ್ವ ಸಂಸ್ಥೆಯ ಸದಸ್ಯರು ಈ ಐತಿಹಾಸಿಕ ಒಪ್ಪಂದಕ್ಕೆ ಸಾಕ್ಷಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.