ಉತ್ತರ ಕೊರಿಯಾದ 6ನೇ ಅಣುಬಾಂಬ್ ಪರೀಕ್ಷೆಗೆ 200 ಮಂದಿ ಬಲಿ?
Team Udayavani, Oct 31, 2017, 5:55 PM IST
ಟೋಕಿಯೊ: ಅಣ್ವಸ್ತ್ರ ಪರೀಕ್ಷೆ ನಡೆಸಿದ್ದ ಸುರಂಗ ಕುಸಿದುಬಿದ್ದ ಪರಿಣಾಮ ಸುಮಾರು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕೊರಿಯಾದಲ್ಲಿ ಸಂಭವಿಸಿರುವುದಾಗಿ ಜಪಾನ್ ನ ಮಾಧ್ಯಮದ ವರದಿಗಳು ತಿಳಿಸಿವೆ.
ಉತ್ತರ ಕೊರಿಯಾದ ಪುಂಗ್ಯೆ ರಿ ಪ್ರದೇಶದಲ್ಲಿನ ಸುರಂಗದಲ್ಲಿ ಉತ್ತರ ಕೊರಿಯಾ 6ನೇ ಬಾರಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಅಣ್ವಸ್ತ್ರ ಪರೀಕ್ಷೆ ನಡೆಸಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿರುವುದಾಗಿ ಉತ್ತರ ಕೊರಿಯಾದ ಹೆಸರು ಹೇಳಲು ಇಚ್ಚಿಸದ ಮೂಲಗಳು ತಿಳಿಸಿರುವುದಾಗಿ ಟಿವಿ ಅಸಾಹಿ ವರದಿ ಮಾಡಿದೆ.
ಅಣ್ವಸ್ತ್ರ ಪರೀಕ್ಷೆಯಲ್ಲಿ ಸುರಂಗ ಕುಸಿದು ಬಿದ್ದಿದ್ದರಿಂದ ಸುಮಾರು 200 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಅಣುಬಾಂಬ್ ಪರೀಕ್ಷೆ ನಡೆಸದಂತೆ ತಜ್ಞರು ಎಚ್ಚರಿಸಿದ್ದರು. ಬೆಟ್ಟದಲ್ಲಿರುವ ಸುರಂಗ ಮಾರ್ಗದಲ್ಲಿ ಅಣ್ವಸ್ತ್ರ ಪರೀಕ್ಷೆ ನಡೆಸಿದರೆ ಬೆಟ್ಟ ಕುಸಿದು, ಚೀನಾ ಗಡಿಭಾಗದಲ್ಲಿರುವ ಪ್ರದೇಶದ ಸಮೀಪ ವಿಕಿರಣಗಳು ಹರಡುವ ಸಾಧ್ಯತೆ ಇದ್ದಿರುವುದಾಗಿ ತಜ್ಞರು ಎಚ್ಚರಿಸಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.