ಭೂಕಂಪ: ಏರುತ್ತಲೇ ಇದೆ ಸಾವಿನ ಸಂಖ್ಯೆ

ನಿಧಾನಗತಿಯಲ್ಲಿ ಪರಿಹಾರ ಕಾರ್ಯಾಚರಣೆ

Team Udayavani, Feb 10, 2023, 6:45 AM IST

tdy-20

ಅಂಕಾರಾ/ಜಕಾರ್ತಾ: ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪ ಉಂಟಾಗಿ ಗುರುವಾರಕ್ಕೆ ಮೂರು ದಿನಗಳು ಪೂರ್ತಿಯಾಗಿವೆ. ಎರಡು ದೇಶಗಳಲ್ಲಿ ಅಸುನೀಗಿದವರ ಸಂಖ್ಯೆ 19,300ನ್ನು ದಾಟಿವೆ.

ಟರ್ಕಿಯ ಪ್ರಧಾನ ನಗರ ಅಂಕಾರ ಸೇರಿದಂತೆ ಹಲವೆಡೆ ಇನ್ನೂ ರಕ್ಷಣೆ ಮತ್ತು ಪರಿಹಾರ ಕಾರ್ಯ ಚುರುಕುಗೊಂಡಿಲ್ಲ. ಹಲವೆಡೆ ಜನರು ಇನ್ನೂ ಕೂಡ ಕುಸಿದ ಬಿದ್ದ ಕಟ್ಟಡಗಳ ಅವಶೇಷಗಳ ಎಡೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಹಲವರನ್ನು ಜೀವಂತವಾಗಿ ಪಾರು ಮಾಡಲಾಗಿದೆ. ಇದರ ನಡುವೆಯೇ, ಟರ್ಕಿಯ ಸರ್ಕಾರ ಭೂಕಂಪದಿಂದ ನೊಂದವರಿಗೆ ಸೂಕ್ತ ನೆರವು ನೀಡುತ್ತಿಲ್ಲ ಎಂದು ಸ್ಥಳೀಯರು ಆರೋಪ ಮಾಡಲು ಆರಂಭಿಸಿದ್ದಾರೆ.

ಭಾರೀ ಚಳಿ:

ಮನೆಗಳನ್ನು ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಟೆಂಟ್‌ಗಳನ್ನು ನಿರ್ಮಿಸಲಾಗಿದ್ದು, ಆಶ್ರಯ ನೀಡಲಾಗಿದೆ. ರಾತ್ರಿಯ ವೇಳೆ ಭಾರಿ ಚಳಿ ಇದೆ ಬೆಂಕಿಯ ಮುಂದೆ ಕುಳಿತು, ರಕ್ಷಣೆ ಮತ್ತು ಪರಿಹಾರ ತಂಡಗಳನ್ನು ಜನರು ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವು ನಗರ ಮತ್ತು ಸ್ಥಳಗಳಿಗೆ ಇನ್ನೂ ಅಗತ್ಯ ನೆರವು ತಲುಪಿಲ್ಲ ಸ್ಥಳೀಯವಾಗಿರುವ ಸಂಘಟನೆಗಳು ಕೈಲಾದ ಸಹಾಯ ಮಾಡುತ್ತಿವೆ. ವಿಶ್ವಸಂಸ್ಥೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಅಧಿಕೃತ ಏಜೆನ್ಸಿಯಾಗಿದೆ. ಹೀಗಾಗಿ, ನಿಧಾನವಾಗಿ ಸಹಾಯ ಹಸ್ತ ವಿಸ್ತರಣೆಯಾಗುತ್ತಿದೆ.

ಸಂತ್ರಸ್ತರಿಂದಲೇ ಕಾರ್ಯಾಚರಣೆ:

ಟರ್ಕಿಯ ಎಲ್ಬಿಸ್ತಾನ್‌ ಎಂಬ ನಗರದಲ್ಲಿ ಸಂತ್ರಸ್ತರೇ ಕುಸಿದು ಬಿಟ್ಟ ಕಟ್ಟಡಗಳನ್ನು ಕೆಡವಿ ಹಾಕಿದ್ದಾರೆ. ಜತೆಗೆ ಮಾನವ ಸರಪಣಿ ರಚಿಸಿ ಅವಶೇಷಗಳನ್ನು ತೆರವುಗೊಳಿ, ಅಸುನೀಗಿದವರ ಶವಗಳನ್ನು ಹೊರ ತೆಗೆಯುತ್ತಿದ್ದಾರೆ. ಅಂತಾಕ್ಯ ಎಂಬಲ್ಲಿ ಸೋನರ್‌ ಗುನೆರ್‌ ಎಂಬ ವ್ಯಕ್ತಿ ಮತ್ತು ಆತನ ಪುತ್ರಿಯನ್ನು ಅವಶೇಷಗಳ ಎಡೆಯಿಂದ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ಸು ಕಂಡಿದ್ದಾರೆ. ಬೆಳಕು ಕಾಣುತ್ತವೇ ಸಂತಸದಿಂದ ಉದ್ಗರಿಸಿದ ಆತ “ನಿಮಗೆಲ್ಲರಿಗೂ ಧನ್ಯವಾದಗಳು. ನಿಮ್ಮ ಸಹಾಯಕ್ಕೆ ನಾನು ಋಣಿ’ ಎಂದು ಕ್ಷೀಣ ಸ್ವರದಲ್ಲಿ ಹೇಳಿದ್ದಾನೆ.

ಅಧ್ಯಕ್ಷ ಎರ್ಡೋಗನ್‌ಗೆ ಸವಾಲು:

ಭೂಕಂಪಕ್ಕೆ ತುತ್ತಾಗಿರುವ ಟರ್ಕಿಯಲ್ಲಿ ಮೇನಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಕ್ಷಣೆ ಮತ್ತು ಪರಿಹಾರ ಕೆಲಸ ವಿಳಂಬವಾಗುತ್ತಿರುವುದು ಅವರಿಗೆ ಸವಾಲಿನ ಪರಿಸ್ಥಿತಿ ತಂದೊಡ್ಡಲಿದೆ. ಜತೆಗೆ ಅವರ ಸರ್ಕಾರ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದೂ ಆರೋಪಗಳು ಇವೆ. ಆದರೆ, ಹಾನಿಗೆ ಈಡಾದ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂಬ ಆರೋಪವನ್ನು ತಿರಸ್ಕರಿಸಿದ್ದಾರೆ.

ಸಿರಿಯಾಕ್ಕೆ ಪ್ರವೇಶ:

ಆತಂಕರಿಕ ಸಂಘರ್ಷದಿಂದ ಜರ್ಝರಿತವಾಗಿರುವ ಸಿರಿಯಾದಲ್ಲಿ ಪರಿಹಾರ ಕಾರ್ಯ ನಿಧಾನಗತಿಯಲ್ಲೇ ಇದೆ. ಆ ದೇಶದ ವಾಯವ್ಯ ಭಾಗದ ಮೂಲಕ ಅಂತಾರಾಷ್ಟ್ರೀಯ ತಂಡಗಳು ಗುರುವಾರ ಪ್ರವೇಶ ಪಡೆದಿವೆ. ಆರು ಟ್ರಕ್‌ಗಳ ಮೂಲಕ ಪರಿಹಾರ ವಸ್ತುಗಳು ಸಿರಿಯಾ ತಲುಪಿವೆ. ಬಂಡುಕೋರರ ನಿಯಂತ್ರಣದಲ್ಲಿ ಇರುವ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ತಂಡಗಳಿಗೆ ಪ್ರವೇಶಾವಕಾಶ ಮಾಡದೇ ಇದ್ದರೆ, ಸಾವಿನ ಸಂಖ್ಯೆ ಹೆಚ್ಚಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದ ಬಳಿಕ ಅಂತಾರಾಷ್ಟ್ರೀಯ ತಂಡಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ಇಂಡೋನೇಷ್ಯಾದಲ್ಲಿ ಭೂಕಂಪ:

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದ ನೋವು ಹಸಿರಾಗಿ ಇರುವಂತೆಯೇ ಇಂಡೋನೇಷ್ಯಾದಲ್ಲಿ ಲಘು ಭೂಕಂಪ ಸಂಭವಿಸಿದೆ. ಅಮೆರಿಕ ಸರ್ಕಾರ ನೀಡಿದ ಮಾಹಿತಿ ಪ್ರಕಾರ ರಿಕ್ಟರ್‌ ಮಾಪಕದಲ್ಲಿ ಅದರ ಪ್ರಮಾಣ 5.1 ಎಂದು ದಾಖಲಾಗಿದೆ. ಇಂಡೋನೇಷ್ಯಾದ ಪಪುವಾ ನ್ಯೂಜಿನಿಯಾದಲ್ಲಿ ಕಂಪನದ ಪ್ರಭಾವದಿಂದಾಗಿ ಸಮುದ್ರದಲ್ಲಿ ಇದ್ದ ತೇಲುವ ರೆಸ್ಟಾರೆಂಟ್‌ ಬಿದ್ದ ಕಾರಣ ನಾಲ್ವರು ಅಸುನೀಗಿದ್ದಾರೆ ಎಂದು ಸರ್ಕಾರ ಪ್ರಕಟಿಸಿದೆ. ಜನವರಿಂದ ಈಚೆಗೆ ಪಪುವಾದಲ್ಲಿ ಪದೇ ಪದೆ ಅಲ್ಪ ಪ್ರಮಾಣದ ಕಂಪನಗಳು ಆಗಾಗ ಉಂಟಾಗುತ್ತಿವೆ.

 

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.