Russia: ರಷ್ಯಾದ ಪೆಟ್ರೋಲ್ ಬಂಕ್ನಲ್ಲಿ ಭೀಕರ ಸ್ಫೋಟ: 35 ಮಂದಿ ಮೃತ್ಯು, ಹಲವರಿಗೆ ಗಾಯ
Team Udayavani, Aug 15, 2023, 3:05 PM IST
ರಷ್ಯಾ: ಪೆಟ್ರೋಲ್ ಬಂಕ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 35 ಜನರು ಮೃತಪಟ್ಟಿದ್ದು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಷ್ಯಾದ ಗಣರಾಜ್ಯದ ಡಾಗೆಸ್ತಾನ್ನಲ್ಲಿ ನಡೆದಿದೆ.
ಸ್ಪೋಟದ ಬಳಿಕ ಪೆಟ್ರೋಲ್ ಬಂಕ್ ಗೆ ಬೆಂಕಿ ವ್ಯಾಪಿಸಿ ಭಾರಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಘಟನೆಯಲ್ಲಿ 35 ಮಂದಿ ಮೃತಪಟ್ಟಿದ್ದು ಸುಮಾರು ಎಂಬತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಮೃತಪಟ್ಟವರಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಫೋಟ ಹೇಗೆ ಸಂಭವಿಸಿತೆಂಬ ವಿಚಾರವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
6 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾದ ಮಖಚ್ಕಲಾ, ಚೆಚೆನ್ಯಾದ ಗಡಿಯಲ್ಲಿರುವ ಡಾಗೆಸ್ತಾನ್ ನಲ್ಲಿ ಘಟನೆ ನಡೆದಿದೆ.
ಸೋಮವಾರ ತಡ ರಾತ್ರಿ ಸ್ಫೋಟದ ಶಬ್ದ ಕೇಳಿಸಿತು ಎಂದು ಡಾಗೆಸ್ತಾನ್ ಆಡಳಿತದ ಮುಖ್ಯಸ್ಥ ಸೆರ್ಗೆಯ್ ಮೆಲಿಕೋವ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.
ಪ್ರತ್ಯಕ್ಷದರ್ಶಿಯ ಮಾಹಿತಿ ಪ್ರಕಾರ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೋರ್ವ ಕಾರು ನಿಲ್ಲಿಸಿದ್ದು ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಬಂಕ್ ಗೆ ವ್ಯಾಪಿಸಿ ಸ್ಪೋಟಗೊಂಡಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Kushtagi: ಹ್ಯಾಂಡಲ್ ಆಸರೆ ಇಲ್ಲದೇ, ಎರಡು ಕೈ ಬಿಟ್ಟು ಸೈಕಲ್ ಚಲಾಯಿಸುವ 61 ವರ್ಷದ ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.