12 ರಿಂದ 15 ವರ್ಷದ ಮಕ್ಕಳಿಗೆ ಫೈಜರ್ ಲಸಿಕೆ ನೀಡಲು ಯುಕೆ ಅನುಮೋದನೆ
Team Udayavani, Jun 4, 2021, 7:40 PM IST
ಬ್ರಿಟನ್ : ಯುಕೆ ಔಷಧ ನಿಯಂತ್ರಕ ಮಂಡಳಿ, ದೇಶದ 12 ರಿಂದ 15 ವರ್ಷದ ಮಕ್ಕಳಿಗೆ ಆ್ಯಂಟಿ ಕೋವಿಡ್ ಫೈಜರ್ ಲಸಿಕೆಯನ್ನು ನೀಡುವುದಕ್ಕೆ ಇಂದು( ಶುಕ್ರವಾರ, ಜೂನ್ 4) ಅನುಮೋದನೆ ನೀಡಿದೆ.
ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ (ಎಂ ಹೆಚ್ ಆರ್ ಎ) “ಕ್ಲಿನಿಕಲ್ ಟ್ರಯಲ್ ಡೇಟಾವನ್ನು ಪರಿಶೀಲಿಸಿದ ನಂತರ 12 ರಿಂದ 15 ವರ್ಷದ ಮಕ್ಕಳಿಗೆ ನೀಡಲು” ಅನುಮೋದನೆ ನೀಡಿದೆ ಎಂದು ತಿಳಿಸಿದೆ.
ಲಸಿಕೆಗಳನ್ನು ಹದಿಹರೆಯದವರಿಗೆ ನೀಡಲು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ (ಇಎಂಎ) ಮತ್ತು ಯುಎಸ್ ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್ ಡಿ ಎ) ಈ ಹಿಂದೆ ಮುಂದಾಗಿತ್ತು.
ಇದನ್ನೂ ಓದಿ : ಉಡುಪಿ: 561 ಮಂದಿಗೆ ಸೋಂಕು ದೃಢ; 585 ಮಂದಿ ಗುಣಮುಖ, ಮೂರು ಮಂದಿ ಸಾವು
ಡಿಸೆಂಬರ್ ನಲ್ಲಿ ಲಸಿಕೆ ಅಭಿಯನ ಆರಂಭವಾದಂದಿನಿಂದ ಇಲ್ಲಿಯವರೆಗೆ ಒಟ್ಟು ದೇಶದ 62 ಮಿಲಿಯನ್ ನಾಗರಿಕರಿಗೆ ಆಸ್ಟ್ರಾಜೆನಿಕಾ ಹಾಗೂ ಫೈಜರ್ ಲಸಿಕೆಗಳನ್ನು ನೀಡಿದೆ.
ನಿನ್ನೆ(ಗುರುವಾರ, ಜೂನ್ 3) ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಆಸ್ಟ್ರಾಜೆನೆಕಾ ಲಸಿಕೆಯ ಎರಡನೇ ಡೋಸ್ ನನ್ನು ಪಡೆದಿದ್ದಾರೆ. ಮೊದಲ ಡೋಸ್ ನಲ್ಲಿ ಮಾರ್ಚ್ ನಲ್ಲಿ ತೆಗೆದುಕೊಂಡಿದ್ದರು. ಇನ್ನು, ದೇಶದ ನಾಗರಿಕರಿರೆಲ್ಲರಿಗೂ ಲಸಿಕೆಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಇನ್ನು, ಜೂನ್ 21 ರಂದು ಕೋವಿಡ್ ನ ನಿರ್ಬಂಧಗಳನ್ನು ತೆಗೆದು ಹಾಕಲು ನಿರ್ಧರಿಸಿದ್ದು, ಕೋವಿಡ್ ಡೆಲ್ಟಾ ರೂಪಾಂತರದೊಂದಿಗೆ ಹೋರಾಡುತ್ತಿದೆ.
ಸಾರ್ವಜನಿಕ ಆರೋಗ್ಯ ಇಂಗ್ಲೆಂಡ್ (ಪಿ ಹೆಚ್ ಇ) ಡೆಲ್ಟಾ ರೂಪಾಂತರ ಪ್ರಬಲ ರೂಪಾಂತರವಾಗಿದೆ ಎಂದು ಹೇಳಿದೆ. ದೇಶದಲ್ಲಿ ಡೆಲ್ಟಾ ರೂಪಾಂತರದ 12,000ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಕಳೆದ ಮಾರ್ಚ್ ನಲ್ಲಿ ಬ್ರೀಟನ್ ನಲ್ಲಿ ಸೋಂಕು ಕಾಣಿಸಿಕೊಂಡಾಗನಿಂದ 4.5 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಮತ್ತು 126,000 ಮೃತಪಟ್ಟಿದ್ದಾರೆ.
ಆದಾಗ್ಯೂ, ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರವು ದೇಶದಲ್ಲಿ ಏರಿಕೆಯಾಗುತ್ತಿದೆ. ಸಂಭವನೀಯ ಮೂರನೇ ಅಲೆ ಬರುವ ಸಾಧ್ಯತೆ ಇರುವ ಕಾರಣದಿಂದ ಲಾಕ್ ಡೌನ್ ಸದ್ಯಕ್ಕೆ ತೆರವುಗೊಳಿಸುವುದು ಬೇಡ ಎಂದು ಯುಕೆ ಆರೋಗ್ಯ ಕಾರ್ಯದರ್ಶಿ ಮ್ಯಾಟ್ ಹ್ಯಾನ್ ಕಾಕ್ ಹೇಳಿದ್ದಾರೆ.
ಕಳೆದ ತಿಂಗಳು, ಯುಕೆ ಸರ್ಕಾರವು ಡೆಲ್ಟಾ ವೈರಸ್ ನ ಭೀತಿಯ ಹೊರತಾಗಿಯೂ ರೆಸ್ಟೋರೆಂಟ್ ಗಳು ಮತ್ತು ಚಿತ್ರಮಂದಿರಗಳನ್ನು ಮತ್ತೆ ತೆರೆಯಲು ಅವಕಾಶ ಮಾಡಿಕೊಟ್ಟಿತ್ತು.
ಇದನ್ನೂ ಓದಿ : ರಾಮನಗರ : ಮ್ಯಾನ್‌ಹೋಲ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.