ಬೆಲಾರಸ್‌ನಿಂದ ಉಕ್ರೇನ್‌ನತ್ತ ರಷ್ಯಾ ಗುರಿ
ಗಡಿಯಿಂದ 50 ಕಿ.ಮೀ. ದೂರದಲ್ಲೇ ಎಸ್-400 ಕ್ಷಿಪಣಿ ನಿಗ್ರಹ ವ್ಯವಸ್ಥೆ ಅಳವಡಿಕೆ
Team Udayavani, Feb 8, 2022, 6:40 AM IST
ಮಾಸ್ಕೊ: ಉಕ್ರೇನ್ ವಿರುದ್ಧ ತೊಡೆ ತಟ್ಟಿ ನಿಂತಿರುವ ರಷ್ಯಾ, ತನ್ನ ಮತ್ತೊಂದು ನೆರೆಯ ರಾಷ್ಟ್ರವಾದ ಬೆಲಾರಸ್‌ನ ಕಡೆಯಿಂದಲೂ ಉಕ್ರೇನ್‌ನತ್ತ ಗುರಿಯಿಟ್ಟಿರುವುದು ಉಪಗ್ರಹ ಚಿತ್ರಗಳ ಮೂಲಕ ತಿಳಿದುಬಂದಿದೆ.
ಅತ್ಯಾಧುನಿಕವಾದ ಜಗತ್ತಿನ ಅತ್ಯಂತ ಪ್ರಬಲವಾದದ್ದೆಂದು ಪರಿಗಣಿಸಲ್ಪಟ್ಟಿರುವ, ಸ್ವದೇಶಿ ನಿರ್ಮಿತ “ಎಸ್-400 ಕ್ಷಿಪಣಿ ನಿಗ್ರಹ ವ್ಯವಸ್ಥೆ’ಯನ್ನು, ಅತ್ಯಂತ ಶಕ್ತಿಶಾಲಿಯಾದ ಕ್ಷಿಪಣಿಗಳಲ್ಲೊಂದಾದ “ಇಸ್ಕಾಂಡರ್’ ಮಾದರಿಯ ಖಂಡಾಂತರ ಕ್ಷಿಪಣಿ ಉಡಾವಣಾ ವ್ಯವಸ್ಥೆಯನ್ನು ಉಕ್ರೇನ್-ಬೆಲಾರಸ್ ಗಡಿಯುದ್ದಕ್ಕೂ ನಿಯೋಜಿಸಲಾಗಿದೆ.
ಉಕ್ರೇನ್ ಗಡಿಯಿಂದ ಕೇವಲ 50 ಕಿ.ಮೀ. ದೂರದಲ್ಲೇ ಇವನ್ನು ಅಳವಡಿಸಿವೆ ಎಂದು ನ್ಯಾಟೋ ಪಡೆಗಳು ತಿಳಿಸಿವೆ. ರಷ್ಯಾ ಮತ್ತು ಬೆಲಾರಸ್ ಕೂಡ ಈ ಜಮಾವಣೆ ಕುರಿತಂತೆ ಜಂಟಿ ಪ್ರಕಟಣೆ ಹೊರಡಿಸಿವೆ.
ಮತ್ತೊಂದೆಡೆ, ರಷ್ಯಾ ಮತ್ತು ಉಕ್ರೇನ್‌ನ ನಡುವೆ ಯಾವುದೇ ಕ್ಷಣದಲ್ಲೂ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಹೇಳಿದೆ.
ಇದನ್ನೂ ಓದಿ:ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5030 ಕೋಟಿ ರೂ. ಅನುದಾನಕ್ಕಾಗಿ ಮುಖ್ಯಮಂತ್ರಿ ಮನವಿ
ಮ್ಯಾಕ್ರನ್ ಸಂಧಾನ ಯತ್ನ
ಉಕ್ರೇನ್- ರಷ್ಯಾ ನಡುವಿನ ಸಂಭಾವ್ಯ ಯುದ್ಧವನ್ನು ನಿಲ್ಲಿಸಲು ಪ್ರಯತ್ನಿಸುತ್ತಿರುವ ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್, ರಷ್ಯಾಕ್ಕೆ ಸದ್ಯದಲ್ಲೇ ಭೇಟಿ ನೀಡಿ, ಅಲ್ಲಿನ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮತ್ತೊಂದೆಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಂಧಾನ ಕಾರ್ಯಗಳು ನಡೆಯುತ್ತಿದ್ದು, ಇವೆಲ್ಲವೂ ಫಲಪ್ರದವಾಗಲಿವೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.