ಚೀನಾ, ಪಾಕ್‌ಗೆ ವಿಶ್ವಸಂಸ್ಥೆ ತಪರಾಕಿ
Team Udayavani, Aug 24, 2019, 5:30 AM IST
ನ್ಯೂಯಾರ್ಕ್: ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿ ಇತ್ತೀಚೆಗೆ ಮುಖಭಂಗ ಮಾಡಿಕೊಂಡಿದ್ದ ಪಾಕಿಸ್ತಾನಕ್ಕೆ ಈಗ ವಿಶ್ವಸಂಸ್ಥೆಯೇ ಚಾಟಿ ಬೀಸಿದೆ. ಪಾಕಿಸ್ತಾನ ಹಾಗೂ ಚೀನಾದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಗುರುವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಆರೋಪಿಸಲಾಗಿದೆ. ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಹಲವು ದೇಶಗಳು ಈ ಕುರಿತು ಆಕ್ಷೇಪ ಎತ್ತಿವೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಪ್ರಸ್ತುತ ಅಧ್ಯಕ್ಷೀಯ ದೇಶವಾಗಿರುವ ಪೋಲೆಂಡ್, ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆ ಕುರಿತಾದ ಸಭೆ ನಡೆಸಿತ್ತು. ಇದರಲ್ಲಿ ಮಾತನಾಡಿದ ಅಮೆರಿಕದ ರಾಯಭಾರಿ ಸ್ಯಾಮುಯೆಲ್ ಬ್ರೌನ್‌ಬ್ಯಾಕ್, ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಹಿಂಸೆಯನ್ನು ಅನುಭವಿಸುತ್ತಲೇ ಇದ್ದಾರೆ. ಕ್ರಿಶ್ಚಿಯನ್ನರು, ಅಹಮದೀಯರು, ಉಯಿಗುರ್, ಹಿಂದೂಗಳು ಸೇರಿದಂತೆ ಇತರ ಅಲ್ಪಸಂಖ್ಯಾತರನ್ನು ಪಾಕಿಸ್ತಾನ ಹಾಗೂ ಚೀನಾದಲ್ಲಿ ಹತ್ತಿಕ್ಕಲಾಗುತ್ತಿದೆ. ಇದಕ್ಕೆ ಸರ್ಕಾರದ ತಾರತಮ್ಯದ ಕಾನೂನುಗಳೂ ಕಾರಣ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಮಾನವ ಹಕ್ಕುಗಳ ಸಂಘಟನೆ ಅಧ್ಯಕ್ಷ ನವೀದ್ ವಾಲ್ಟರ್ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.