ಮುಂದಿನ ತಿಂಗಳು ಹೊಸದಿಲ್ಲಿಯಲ್ಲಿ ಮಾತುಕತೆ : 71 ಸಾವಿರ ಕೋಟಿ ಡೀಲ್?
Team Udayavani, Jan 30, 2020, 8:20 AM IST
ಹೊಸದಿಲ್ಲಿ: ಮುಂದಿನ ತಿಂಗಳ ಕೊನೆಯ ವಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಭಾರತ – ಅಮೆರಿಕ 71 ಸಾವಿರ ಕೋಟಿ ರೂ. ಮೌಲ್ಯದ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಗಳಿವೆ. ಅಮೆರಿಕದ ವ್ಯಾಪಾರದ ವಿಚಾರಗಳಿಗಾಗಿರುವ ವಿಶೇಷ ಪ್ರತಿನಿಧಿ ರಾಬರ್ಟ್ ಲೈಟ್ಜರ್ ಮುಂದಿನ ತಿಂಗಳು ಹೊಸದಿಲ್ಲಿಗೆ ಆಗಮಿಸಲಿದ್ದಾರೆ. ಈ ಸಂದರ್ಭ 2 ದೇಶಗಳ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ.
ದಾವೋಸ್‌ನಲ್ಲಿ ಇದೇ ವಿಚಾರದ ಬಗ್ಗೆ ಅಮೆರಿಕ ನಿಯೋಗದ ಜತೆಗೆ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮಾತುಕತೆ ನಡೆಸಿದ್ದರು. ಜತೆಗೆ ಕಳೆದ ವಾರ ಅಮೆರಿಕದ ನಿಯೋಗ ಕೂಡ ಹೊಸದಿಲ್ಲಿ ಆಗಮಿಸಿ, ವಿವಿಧ ಸಚಿವರ ಜತೆಗೆ ಚರ್ಚೆ ನಡೆಸಬೇಕಾದ ವಿಚಾರಗಳ ಬಗ್ಗೆ ಪೂರ್ವ ಭಾವಿ ಸಭೆ ನಡೆಸಿತ್ತು.
24ರಿಂದ ಪ್ರವಾಸ?: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಭಾರತ ಪ್ರವಾಸ ಫೆ.24-26ರವರೆಗೆ ಇರುವ ಸಾಧ್ಯತೆಗಳು ಇವೆ. ಈ ಬಗ್ಗೆ ಶೀಘ್ರದಲ್ಲಿಯೇ ದಿನಾಂಕ – ವಿವರಗಳು ಎರಡೂ ಸರಕಾರಗಳ ವತಿಯಿಂದ ಅಧಿಕೃತ ಘೋಷಣೆಯಾಗಲಿವೆ.
ಅಕ್ಟೋಬರ್ – ನವೆಂಬರ್ ವೇಳೆ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಮತ್ತು ಸದ್ಯ ಅವರ ವಿರುದ್ಧ ಅಮೆರಿಕ ಸಂಸತ್‌ನಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಾಗ್ಧಂಡನೆ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ ಈ ಪ್ರವಾಸ ಕೈಗೊಂಡಿರುವುದು ಮಹತ್ವಪೂರ್ಣ ವಾಗಿದೆ. ಅದಕ್ಕೆ ಪೂರಕವಾಗಿ ಅಮೆರಿಕದಲ್ಲಿ ಭಾರತದ ನೂತನ ರಾಯಭಾರಿಯಾಗಿ ನೇಮಕ ಗೊಂಡಿರುವ ಐಎಫ್ಎಸ್ ಅಧಿಕಾರಿ ತರಣ್‌ಜಿತ್ ಸಿಂಗ್ ಸಂಧು ಮುಂದಿನ ತಿಂಗಳ ಮೊದಲ ವಾರದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.