JeM ಹಣ, ಆಸ್ತಿಪಾಸ್ತಿ ತ್ವರಿತ ಸ್ತಂಭನ: ಪಾಕಿಗೆ ಅಮೆರಿಕ ಖಡಕ್ ಮಾತು
Team Udayavani, Feb 16, 2019, 6:33 AM IST
ವಾಷಿಂಗ್ಟನ್ : ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಿಂದ ನಿಷೇಧಿಸಲ್ಪಟ್ಟಿರುವ ಜೆಇಎಂ ಸಹಿತ ಹಲವು ಉಗ್ರ ಸಂಘಟನೆಗಳು ಮತ್ತು ಅವುಗಳ ನಾಯಕರ ಹಣ, ಆಸ್ತಿಪಾಸ್ತಿ ಇತ್ಯಾದಿಗಳನ್ನು ಪಾಕಿಸ್ಥಾನ ಇನ್ನು ಎಷ್ಟು ಮಾತ್ರಕ್ಕೂ ವಿಳಂಬಿಸದೇ ಕೂಡಲೇ ಸ್ತಂಭನಗೊಳಿಸಬೇಕು ಎಂದು ಅಮೆರಿಕ ಕಟ್ಟುನಿಟ್ಟಾಗಿ ಹೇಳಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ನಡೆದಿರುವ ಉಗ್ರ ದಾಳಿಯ ಹೊಣೆ ಹೊತ್ತಿರುವ ಪಾಕ್ ಮೂಲದ ಜೆಇಎಂ ಉಗ್ರ ಸಂಘಟನೆ ಮಾತ್ರವಲ್ಲದೆ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಇನ್ನೂ ಹಲವು ಉಗ್ರ ಸಮೂಹಗಳ ವಿರುದ್ಧ ಪಾಕಿಸ್ಥಾನ ತಡಮಾಡದೆ ಕಠಿನ ಕ್ರಮತೆಗೆದುಕೊಳ್ಳಬೇಕು ಎಂದು ಅಮೆರಿಕ ಕಠಿನವಾಗಿ ನುಡಿದಿದೆ.
ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯನ್ನು ವಿಶ್ವಸಂಸ್ಥೆ 2002ರಲ್ಲೇ ನಿಷೇಧಿಸಿದೆ. ಇದಕ್ಕೂ ಹಿಂದೆ 2001ರ ಡಿಸೆಂಬರ್‌ನಲ್ಲಿ ಅಮೆರಿಕ ಈ ಉಗ್ರ ಸಂಘಟನೆಯನ್ನು ನಿಷೇಧಿಸಿದೆ. ಆದರೂ ಅದು ಪಾಕಿಸ್ಥಾನದಲ್ಲಿ ಇಂದಿಗೂ ಕಾರ್ಯಾಚರಿಸುತ್ತಿದೆ. ಈ ಉಗ್ರ ಸಂಘಟನೆ ಭವಿಷ್ಯದಲ್ಲಿ ಯಾವುದೇ ಉಗ್ರ ದಾಳಿ ಕೈಗೊಳ್ಳದಂತೆ ಮಾಡುವ ಕ್ರಮಗಳನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಎಂದು ಅಮೆರಿಕದ ವಿದೇಶಾಂಗ ವಕ್ತಾರ ಹೇಳಿದ್ದಾರೆ.
ಜೆಇಎಂ ಮತ್ತು ಇತರ ನಿಷೇಧಿತ ಉಗ್ರ ಸಂಘಟನೆಗಳ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳುವ ತನ್ನ ಜವಾಬ್ದಾರಿಯನ್ನು ಪಾಕಿಸ್ಥಾನ ಎತ್ತಿಹಿಡಿಯುವುದೆಂದು ನಾವು ನಿರೀಕ್ಷಿಸುತ್ತೇವೆ ಎಂದು ವಕ್ತಾರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.