ಉಗ್ರರ ಮಟಾಷ್: ಭಾರತಕ್ಕೆ ಅಮೆರಿಕದ ಪ್ರಿಡೇಟರ್ ಗಾರ್ಡಿಯನ್ ಡ್ರೋನ್
Team Udayavani, Jun 27, 2017, 11:29 AM IST
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಉಭಯ ದೇಶಗಳ ನಡುವಿನ ಭದ್ರತೆ ಮತ್ತು ರಕ್ಷಣಾ ಸಹಕಾರವನ್ನು ಇನ್ನಷ್ಟು ಆಳಕ್ಕೆ ಒಯ್ಯುವ ಪಣ ತೊಟ್ಟಿರುವಂತೆಯೇ ಅಮೆರಿಕ ಭಾರತಕ್ಕೆ ಪ್ರಿಡೇಟರ್ ಗಾರ್ಡಿಯನ್ ಡ್ರೋನ್‌ಗಳ ಮಾರಾಟಕ್ಕೆ ಅನುಮೋದನೆ ನೀಡಿದೆ.
ಅಮೆರಿಕದ ಅತ್ಯಂತ ನಿಕಟ ಮಿತ್ರ ದೇಶಗಳು ಹಾಗೂ ಪಾಲುದಾರರಿಗೆ ಸರಿಸಮನಾದ ಮಟ್ಟದಲ್ಲಿ ಅತ್ಯಾಧುನಿಕ ರಕ್ಷಣಾ ಪರಿಕರ ಮತ್ತು ತಂತ್ರಜ್ಞಾನವನ್ನು ವಿನಿಮಯಿಸಿಕೊಳ್ಳುವ ದಿಶೆಯಲ್ಲಿ ಕೆಲಸ ಮಾಡುವುದನ್ನು ಭಾರತ ಮತ್ತು ಅಮೆರಿಕ ಎದುರು ನೋಡುತ್ತಿವೆ ಎಂದು ಶ್ವೇತ ಭವನದಲ್ಲಿ ಭಾರತ – ಅಮೆರಿಕ ಶೃಂಗ ನಡೆದ ಬಳಿಕ ಹೊರಡಿಸಲಾದ ಜಂಟಿ ಹೇಳಿಕೆಯಲ್ಲಿ ಘೋಷಿಸಲಾಗಿದೆ.
ಭಾರತವನ್ನು ಅಮೆರಿಕವು ತನ್ನ ಪ್ರಮುಖ ರಕ್ಷಣಾ ಪಾಲುದಾರ ದೇಶವಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ಅವರು ಉಭಯ ದೇಶಗಳ ನಡುವಿನ ರಕ್ಷಣೆ ಮತ್ತು ಭದ್ರತಾ ಸಹಕಾರವನ್ನು ಇನ್ನಷ್ಟು ಆಳಕ್ಕೆ ಒಯ್ಯುವ ಪಣ ತೊಟ್ಟಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಹಿಂದೂ ಮಹಾಸಾಗರ ನೌಕಾ ವಿಚಾರ ಸಂಕಿರಣದಲ್ಲಿ ವೀಕ್ಷಕನಾಗುವಂತೆ ಕೋರುವ ಮೂಲಕ ಭಾರತ ಅಮೆರಿಕವನ್ನು ಬೆಂಬಲಿಸಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕ, ಜಪಾನ್ ಮತ್ತು ಭಾರತವನ್ನು ಒಳಗೊಂಡ ಮಲಬಾರ್ ನೌಕಾ ಕವಾಯತು ನಡೆಸಲಾಗುವುದರ ಮಹತ್ವವನ್ನು ಪರಿಗಣಿಸಿರುವ ಉಭಯ ನಾಯಕರು ಈ ಬಗೆಯ ಹೊಸ ಕವಾಯತುಗಳನ್ನು ನಡೆಸುವ ಹಾಗೂ ಸಾಗರಿಕರ ಧ್ಯೇಯೋದ್ದೇಶಗಳನ್ನು ಹಂಚಿಕೊಳ್ಳುವ ಪ್ರಯತ್ನಗಳನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವನ್ನು ಕಂಡುಕೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.