US Election; ಬೈಡೆನ್ ಬದಲಿಗೆ ಮಿಶೆಲ್ ಅಧ್ಯಕ್ಷೀಯ ಅಭ್ಯರ್ಥಿ?
Team Udayavani, Jun 30, 2024, 6:26 AM IST
ವಾಷಿಂಗ್ಟನ್: ವರ್ಷಾಂತ್ಯ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ರಂಗೇರಲಾರಂಭಿಸಿದೆ. ಶುಕ್ರವಾರ ಸಿಎನ್‌ಎನ್ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಪ್ರಶ್ನೆಗಳಿಗೆ ಉತ್ತರಿಸಲು ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ತಡವರಿಸಿದ ಬೆನ್ನಲ್ಲೇ ಅವರ ಬದಲು ಬೇರೆ ಅಭ್ಯರ್ಥಿ ಕಣಕ್ಕೆ ಇಳಿಸುವ ಚಿಂತನೆಗಳು ನಡೆದಿವೆ ಎನ್ನಲಾಗಿದೆ.
ಟ್ರಂಪ್ ವಿರುದ್ಧ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಪತ್ನಿ ಮಿಶೆಲ್ ಒಬಾಮಾ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎಂದು ಸಂಸದ ಟೆಡ್ ಕ್ರೂಜ್ ಸುಳಿವು ನೀಡಿದ್ದಾರೆ. ಚರ್ಚೆ ವೇಳೆ ಟ್ರಂಪ್ ವಾಗ್ಧಾಳಿಗೆ ಸೂಕ್ತ ಉತ್ತರ ನೀಡುವಲ್ಲಿ ಬೈಡೆನ್ ವಿಫಲವಾಗಿದ್ದು, ಡೆಮಾಕ್ರಾಟ್‌ಗಳ ಅಸಮಾಧಾನಕ್ಕೆ ಕಾರಣವಾಗಿದೆ. ರಿಪಬ್ಲಿಕನ್ನರೂ “ಮೊದಲು ನಿಮ್ಮ ಅಭ್ಯರ್ಥಿಬದಲಿಸಿ’ ಎಂದು ಸವಾಲು ಹಾಕು ತ್ತಿದ್ದಾರೆ. ಇದರ ಬೆನ್ನಲ್ಲೇ ಬೈಡೆನ್‌ರನ್ನು ಬದಲಾಯಿಸುವುದಿದ್ದರೆ ಅವರ ಸ್ಥಾನಕ್ಕೆ ಮಿಶೆಲ್ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬೈಡೆನ್ ಸೋಲುಂಡರೂ ಅವರ ಬೆನ್ನಿಗೆ ನಿಂತಿರುವ ಮಾಜಿ ಅಧ್ಯಕ್ಷ ಒಬಾಮಾ, “ಚರ್ಚೆ ವೇಳೆ ಕೆಲವೊಮ್ಮೆ ಹಿನ್ನಡೆ ಸಹಜ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.