ಗ್ರೀನ್ ಕಾರ್ಡ್‌ಗೆ ನಿರ್ಬಂಧ; 60 ದಿನಗಳವರೆಗೆ ವಿತರಣೆ ಸ್ಥಗಿತ : ಡೊನಾಲ್ಡ್ ಟ್ರಂಪ್
Team Udayavani, Apr 23, 2020, 12:01 PM IST
ವಾಷಿಂಗ್ಟನ್: ಅಮೆರಿಕಕ್ಕೆ ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ತಮ್ಮ ಕಾರ್ಯನಿರ್ವಾಹಕ ಆದೇಶದ ಭಾಗವಾಗಿ ಮುಂದಿನ 60 ದಿನಗಳವರೆಗೆ ಹೊಸ ‘ಹಸಿರು ಕಾರ್ಡ್’ಗಳನ್ನು, ಅಂದರೆ, ಕಾನೂನುಬದ್ಧ ಶಾಶ್ವತ ನಿವಾಸ ಹಕ್ಕು ನೀಡುವ ಪ್ರಕ್ರಿಯೆಯನ್ನು ನಿಲ್ಲಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ತಿಳಿಸಿದ್ದಾರೆ.
ವಿದೇಶಿಯರು ದೇಶಕ್ಕೆ ವಲಸೆ ಬರುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಆದೇಶಕ್ಕೆ ಸಹಿ ಹಾಕುವುದಾಗಿ ತಿಳಿಸಿದ ಮರುದಿನವೇ ಅಧ್ಯಕ್ಷರ ಈ ಹೊಸ ನಿರ್ಧಾರ ಹೊರಬಿದ್ದಿದೆ. ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಫ್, ‘ಕೋವಿಡ್ ಸಂಕಷ್ಟದ ಸಮಯದಲ್ಲಿ ಅಮೆರಿಕನ್ ಪ್ರಜೆಗಳ ಉದ್ಯೋಗ ರಕ್ಷಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಆದೇಶವು 60 ದಿನಗಳ ಕಾಲ ಜಾರಿಯಲ್ಲಿ ಇರುತ್ತದೆ. ಬಳಿಕ, ಇದನ್ನು ವಿಸ್ತರಿಸಬೇಕೇ, ಬೇಡವೆ ಎಂಬುದನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಎಚ್1-ಬಿ ವೀಸಾ ಇದ್ದವರ ಮೇಲೆ ಪರಿಣಾಮವಿಲ್ಲ
ಈಗಿರುವ ಕಾನೂನಿನ ಪ್ರಕಾರ, ಅಮೆರಿಕ ಸರ್ಕಾರ ಪ್ರತಿವರ್ಷ, ಪ್ರತಿದೇಶಕ್ಕೆ ಶೇ.7ರ ಪ್ರಮಾಣದಲ್ಲಿ ಗರಿಷ್ಠ 1,40,000 ಉದ್ಯೋಗ ಆಧಾರಿತ ಹಸಿರು ಕಾರ್ಡ್‌ಗಳನ್ನು ನೀಡುತ್ತದೆ. ಭಾರತೀಯ ಐಟಿ ವೃತ್ತಿಪರರಲ್ಲಿ ಜನಪ್ರಿಯವಾಗಿರುವ ಎಚ್1-ಬಿ ವೀಸಾದ ರೀತಿಯಲ್ಲಿ ವಲಸೆ ರಹಿತ ವೀಸಾಗಳನ್ನು ಹೊಂದಿರುವ ವಿದೇಶಿಗರಿಗೆ ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ.
ಕೃಷಿ ಚಟುವಟಿಕೆಗಳಿಗೆ ಋತುಮಾನದ ವಲಸೆ ಕಾರ್ಮಿಕರ ಮೇಲೆ ಸಹ ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಆದರೆ, ‘ಗ್ರೀನ್ ಕಾರ್ಡ್’ಗಾಗಿ ಅರ್ಜಿ ಹಾಕಿ, ಕಾನೂನುಬದ್ಧವಾಗಿ ಶಾಶ್ವತ ನಿವಾಸದ ಹಕ್ಕಿಗಾಗಿ ಕಾಯುತ್ತಿರುವ ಸಾವಿರಾರು ಭಾರತೀಯ ಅಮೆರಿಕದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಗ್ರೀನ್ ಕಾರ್ಡ್ ಸಿಗುವುದು ಮತ್ತಷ್ಟು ವಿಳಂಬವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.