ಅಮೆರಿಕದಲ್ಲಿ ಕೋವಿಡ್ ಅಟ್ಟಹಾಸ: ಒಂದೇ ದಿನ 2,448 ಜನರು ಬಲಿ,75ಸಾವಿರ ದಾಟಿದ ಸಾವಿನ ಸಂಖ್ಯೆ
Team Udayavani, May 8, 2020, 9:13 AM IST
ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್ -19 ಮರಣ ಮೃದಂಗ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 2,448 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಆ ಮೂಲಕ ಒಟ್ಟಾರೆ ಮೃತಪಟ್ಟವರ ಸಂಖ್ಯೆ 75ಸಾವಿರದ ಗಡಿ ದಾಟಿದ್ದು, ಸಾವಿನ ಪ್ರಮಾಣ ಮತ್ತಷ್ಟು ಏರುವ ಸಾಧ್ಯತೆಯಿದೆ ಎಂದು ಜಾನ್ಸ್ ಹಾಫ್ ಕಿನ್ಸ್ ಯುನಿವರ್ಸಿಟಿ ತಿಳಿಸಿದೆ.
ಜಗತ್ತಿನ ಇತರೆ ದೇಶಗಳೀಗಿಂತ ಅಮೆರಿಕಾದಲ್ಲೇ ಸಾವಿನ ಪ್ರಮಾಣ ಹೆಚ್ಚಾಗಿದ್ದು, ಸೋಂಕಿತರ ಪ್ರಮಾಣ ಏಕಾಏಕಿ ದ್ವಿಗುಣಗೊಂಡಿದೆ ಎಂದು ಎನ್ ಡಿಟಿವಿ ತಿಳಿಸಿದೆ. ಇಲ್ಲಿಯವರೆಗೂ ಸುಮಾರು 12ಲಕ್ಷಕ್ಕಿಂತ ಹೆಚ್ಚು ಜನರು ವೈರಾಣುವಿಗೆ ತುತ್ತಾಗಿದ್ದು ನ್ಯೂಯಾರ್ಕ್ ನಗರವೊಂದರಲ್ಲೇ ಸುಮಾರು 26 ಸಾವಿರ ಜನ ಮೃತಪಟ್ಟಿದ್ದಾರೆ. ಇಲ್ಲಿ ಸೋಂಕಿತರ ಪ್ರಮಾಣವೂ ಹೆಚ್ಚಿದ್ದು (3,37,421), ನ್ಯೂಜೆರ್ಸಿಯಲ್ಲೂ ಈ ಮಹಾಮಾರಿ ಅಟ್ಟಾಹಾಸ ಮೆರೆಯುತ್ತಿದೆ.
ಜಗತ್ತಿನಾದ್ಯಂತ ಈ ಸೋಂಕಿಗೆ ಒಟ್ಟಾರೆ ಬಲಿಯಾದವರ ಸಂಖ್ಯೆ 2,70,720 ದಾಟಿದ್ದು 39 ಲಕ್ಷಕ್ಕಿಂತಲೂ ಹೆಚ್ಚು ಜನರು ವೈರಾಣುವಿನಿಂದ ಬಳಲುತ್ತಿದ್ಧಾರೆ. ಇದರಲ್ಲಿ 13,44,120 ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.