ಕೋವಿಡ್-19 ಆರ್ಭಟ: ಒಂದೇ ದಿನ ಅಮೆರಿಕಾದಲ್ಲಿ 2,600 ಜನ ಬಲಿ, ಸೋಂಕಿತರ ಪ್ರಮಾಣವೂ ಹೆಚ್ಚಳ
Team Udayavani, Apr 16, 2020, 8:03 AM IST
ನ್ಯೂಯಾರ್ಕ್: ವಿಶ್ವದ ದೊಡ್ಡಣ್ಣ ಕೋವಿಡ್ -19 ರುದ್ರ ನರ್ತನಕ್ಕೆ ನಲುಗಿ ಹೋಗಿದ್ದು 24 ಗಂಟೆಗಳ ಅವಧಿಯಲ್ಲಿ ಸುಮಾರು 2,600 ಜನ ಬಲಿಯಾಗಿದ್ದಾರೆ. ಅಮೆರಿಕಾದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಸಾವು ಸಂಭವಿಸಿದ್ದು ದುರಂತ ದಾಖಲೆಯಾಗಿದೆ. ಆ ಮೂಲಕ ಜಗತ್ತಿನಲ್ಲೇ ಅತೀ ಹೆಚ್ಚು ಕೋವಿಡ್ 19 ಪ್ರಕರಣಗಳು ದಾಖಲಾದ ದೇಶ ಎನಿಸಿಕೊಂದಿದೆ.
ಈ ದೇಶದಲ್ಲಿ 6,44,089 ಜನರು ಸೋಂಕಿಗೆ ತುತ್ತಾಗಿದ್ದು ಒಟ್ಟಾರೆ ಸಾವಿನ ಪ್ರಮಾಣ 28,529ರ ಗಡಿ ದಾಟಿದೆ. ಈ ಕುರಿತು ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾವಿನ ಮತ್ತು ಸೋಂಕಿತರ ಪ್ರಮಾಣ ದಿನೇ ದಿನೇ ಉತ್ತುಂಗಕ್ಕೇರುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೊಸ ಮಾರ್ಗ ಸೂಚಿಗಳನ್ನು ತರಲಾಗುವುದು. ಜಗತ್ತಿನಲ್ಲಿ ಯಾವುದೇ ದೇಶದಲ್ಲಾಗದಷ್ಟು ಸಾವು-ನೋವಿನ ಪ್ರಕರಣಗಳು ಯುಎಸ್ ನಲ್ಲಿ ವರದಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು ಸಮರ್ಪಕ ಕಾರ್ಯನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಅಮೆರಿಕಾವು ಅದಕ್ಕೆ ನೀಡುತ್ತಿದ್ದ ಧನಸಹಾಯವನ್ನು ನಿಲ್ಲಿಸಿರವುದು ಜಗತ್ತಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.
ಭಾರತದಲ್ಲೂ ಕೋವಿಡ್ 19 ಆರ್ಭಟ ಮುಂದುವರೆದಿದ್ದು ಸೋಂಕಿತರ ಪ್ರಮಾಣ 12 ಸಾವಿರದ ಗಡಿ ತಲುಪಿದೆ. ಮೃತರ ಸಂಖ್ಯೆಯೂ 392ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಜಗತ್ತಿನಾದ್ಯಂತ ಕೋವಿಡ್ 19 ರುದ್ರ ನರ್ತನ ಮುಂದುವರೆದಿದ್ದು 2.5 ಮಿಲಿಯನ್ ಗಿಂತಲೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದು1,34, 610 ಜನರು ಮೃತಪಟ್ಟಿದ್ದಾರೆಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.