![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 12, 2024, 11:56 AM IST
ಹಸ್ಟನ್ : ಅಮೆರಿಕದಲ್ಲಿ ಲಿಂಗ ಪರಿವರ್ತಿತ ಮಹಿಳೆಯೊಬ್ಬಳು 64 ವರ್ಷದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಸುದ್ದಿ ವಿಶ್ವದಾದ್ಯಂತ ಭಾರೀ ಸುದ್ದಿಯಾಗಿದ್ದು ವಿಡಿಯೋಗಳೂ ವೈರಲ್ ಆಗಿವೆ.
ಕಾರಿನಲ್ಲಿ ಬಂದ ಲಿಂಗ ಪರಿವರ್ತಿತ ಮಹಿಳೆ ಆಘಾತಕಾರಿ ಎಂಬಂತೆ ಮೊದಲು ನಡೆದುಕೊಂಡು ಹೋಗುತ್ತಿದ್ದ ಆಂಡರ್ಸನ್ ಎಂಬ ವ್ಯಕ್ತಿಗೆ ಢಿಕ್ಕಿ ಹೊಡೆದು ಬೀಳಿಸಿದ್ದು, ಆ ಬಳಿಕ ರಿವರ್ಸ್ ಬಂದು ಮೈಮೇಲೆ ಕಾರು ಹರಿಸಿದ್ದಾಳೆ. ಇಳಿದು ಬಂದು ದೇಹವನ್ನು ಪದೇ ಪದೇ ಚುಂಬಿಸಿ 9 ಬಾರಿ ಇರಿದು ಅಟ್ಟಹಾಸ ತೋರಿರುವುದು ದಾಖಲಾಗಿದೆ. ಫಿಶರ್ ಎಂಬ ಲಿಂಗ ಪರಿವರ್ತಿತೆ ಈ ಭೀಕರ ಕೃತ್ಯ ಎಸಗಿದ್ದಾಳೆ.
ಕೃತ್ಯ ಎಸಗಿದ ಬಳಿಕ ಕಪ್ಪು ಶಾರ್ಟ್ಸ್ ಧರಿಸಿದ್ದ ಫಿಶರ್ ಮತ್ತೊಂದು ಕಾರನ್ನು ಹತ್ತಲು ಪ್ರಯತ್ನಿಸಿದ್ದು, ಸಾಧ್ಯವಾಗಲಿಲ್ಲ. ದಾರಿಹೋಕರು ಭಯಾನಕ ದೃಶ್ಯಗಳನ್ನು ವೀಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಫಿಶರ್ ಅವರನ್ನು ಬಂಧಿಸಿ ಕೊಲೆ ಆರೋಪ ಹೊರಿಸಲಾಗಿದೆ. ಆಕೆ ಆಸ್ಪತ್ರೆಯ ಸಿಬಂದಿಯೊಬ್ಬರ ಮೇಲೆಯೂ ಹಲ್ಲೆ ನಡೆಸಿದ್ದಾಳೆ ಎಂದು ಹ್ಯಾರಿಸ್ ಕೌಂಟಿ ದಾಖಲೆಗಳು ತಿಳಿಸಿವೆ.
ನ್ಯಾಯಾಲಯದ ದಾಖಲೆಗಳಲ್ಲಿ ಕೃತ್ಯ ಎಸಗಿದ ಆರೋಪಿ ಪುರುಷ ಎಂದು ಉಲ್ಲೇಖಿಸಲಾಗಿದೆಯಾದರೂ ಪೊಲೀಸರು ಮಹಿಳೆ ಎಂದು ಗುರುತಿಸಿದ್ದಾರೆ. ಆಕೆಯ ಬಂಧನಕ್ಕೂ ಮುನ್ನ, ಫಿಶರ್ 2023ರಲ್ಲಿ ನಡೆದ ಪ್ರಕರಣವೊಂದರಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಸಮುದಾಯದ ಮೇಲ್ವಿಚಾರಣೆಯಲ್ಲಿದ್ದರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ತಿಳಿಸಿದೆ.
ಈ ಹಿಂದೆ 2021 ರಲ್ಲಿ ಫಿಶರ್ ಮೇಲೆ ವೇಶ್ಯಾವಾಟಿಕೆ ಆರೋಪ ಹೊರಿಸಲಾಗಿತ್ತು, ಆದರೆ ಆ ಪ್ರಕರಣವನ್ನು ವಜಾಗೊಳಿಸಲಾಗಿತ್ತು. ಮೇ 24 ರಂದು ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.
ಪ್ರತ್ಯಕ್ಷದರ್ಶಿಗಳು ಹಾಡಹಗಲಿನ ಕೊಲೆಯನ್ನು ಕಂಡು ಬೆಚ್ಚಿ ಬಿದ್ದಿರುವುದಾಗಿ ಹೇಳಿದ್ದಾರೆ. ಏನಾಯಿತು ಎಂದು ತಿಳಿಯಲಿಲ್ಲ, ಇಲ್ಲಿ ಮಕ್ಕಳು ಆಟವಾಡುತ್ತಿದ್ದರು, ಅವರ ಸ್ಥಿತಿಯನ್ನು ಊಹಿಸಿಕೊಳ್ಳಿ” ಎಂದು ನೆರೆಹೊರೆಯ ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.