US, UK Launch Strikes: ಯೆಮೆನ್‌ನಲ್ಲಿ ಹೌತಿ ನೆಲೆಗಳ ಮೇಲೆ ಬ್ರಿಟನ್, ಅಮೇರಿಕ ದಾಳಿ
Team Udayavani, Jan 12, 2024, 8:49 AM IST
ವಾಷಿಂಗ್ಟನ್: ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ನೆಲೆಗಳ ಮೇಲೆ ಅಮೆರಿಕ ಮತ್ತು ಬ್ರಿಟನ್ ಸೇನೆಗಳು ವೈಮಾನಿಕ ದಾಳಿ ನಡೆಸಿವೆ.
ಉಭಯ ದೇಶಗಳ ಸೇನೆಗಳು ಗುರುವಾರ ಇರಾನ್ ಬೆಂಬಲಿತ ಹೌತಿ ಬಂಡುಕೋರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಹೇಳಿದೆ, ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪು ಕೆಂಪು ಸಮುದ್ರದಲ್ಲಿ ಅಂತಾರಾಷ್ಟ್ರೀಯ ಹಡಗು ಸಾರಿಗೆಯ ಮೇಲೆ ದಾಳಿ ನಡೆಸಿದ ಬಳಿಕ ಈ ದಾಳಿ ನಡೆದಿದ್ದು ಮುಂದಿನ ದಿನಗಳಲ್ಲಿ ಹಡಗು ಸಾರಿಗೆಯ ಮೇಲೆ ಹೌತಿ ಬಂಡುಕೋರರು ದಾಳಿ ಪುನರಾವರ್ತನೆಯಾದರೆ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಏತನ್ಮಧ್ಯೆ, ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು “ಕೆಂಪು ಸಮುದ್ರದಲ್ಲಿ ಅಂತರಾಷ್ಟ್ರೀಯ ಸರಕು ಹಡಗುಗಳ ಮೇಲೆ ದಾಳಿ ನಡೆಸಿರುವ ಹೌತಿ ಬಂಡುಕೋರರ ವಿರುದ್ಧ ದಾಳಿ ನಡೆಸಲು ಯಾವುದೇ ಕಾರಣಕ್ಕೂ ಹಿಂಜರಿಯುವ ಪ್ರಶ್ನೆ ಇಲ್ಲ ದಾಳಿ ಮುಂದುವರೆದರೆ ಮುಂದಿನ ಕ್ರಮ ನಾವು ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.
ಈ ಉದ್ದೇಶಿತ ದಾಳಿಯು ಅಮೇರಿಕ ಮತ್ತು ನಮ್ಮ ಪಾಲುದಾರರು ಸೇರಿದಂತೆ ನಮ್ಮ ಸಿಬ್ಬಂದಿಯ ಮೇಲಿನ ದಾಳಿಯನ್ನು ಇಂದಿಗೂ ಸಹಿಸುವುದಿಲ್ಲ ಜೊತೆಗೆ ಸಮುದ್ರ ಸಾರಿಗೆಯ ವ್ಯವಸ್ಥೆಯನ್ನು ಹಾಳು ಮಾಡಲು ಬಿಡಲ್ಲ ಎಂದಿದ್ದಾರೆ. ಇದೇ ವೇಳೆ ವ್ಯಾಪಾರೀ ಹಡಗುಗಳಿಗೆ ಬೆದರಿಕೆ ಹಾಕುತಿದ್ದ ಹೌತಿ ಬಂಡುಕೋರರಿಗೆ ತಕ್ಕ ಉತ್ತರ ನೀಡಿದ್ದೇವೆ ಎಂದು ಬ್ರಿಟನ್ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ.
ಈ ದಾಳಿಯ ನಂತರ, ಇರಾಕ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯ ಮೇಲೆ ದಾಳಿಯ ಸುದ್ದಿಯೂ ಮುನ್ನೆಲೆಗೆ ಬರುತ್ತಿದೆ.
ವೈಮಾನಿಕ ದಾಳಿಗೆ ಸಂಬಂಧಿಸಿದ ಕೆಲವು ವೀಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು. ಇದರಲ್ಲಿ ದಾಳಿಯ ದೃಶ್ಯಗಳನ್ನು ಕಾಣಬಹುದಾಗಿದೆ.
BREAKING: VIDEO OF MAJOR STRIKES IN MULTIPLE LOCATIONS IN YEMEN pic.twitter.com/BKb8oWitKe
— Sulaiman Ahmed (@ShaykhSulaiman) January 11, 2024
Today, at my direction, US military forces together with the United Kingdom and with support from Australia, Bahrain, Canada, and the Netherlands—successfully conducted strikes against a number of targets in Yemen used by Houthi rebels to endanger freedom of navigation in one of… pic.twitter.com/LjCbT6kwiN
— ANI (@ANI) January 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.