ಈ ವರ್ಷಾಂತ್ಯದ ವೇಳೆ ಅಮೆರಿಕಾದಲ್ಲಿ ಕೋವಿಡ್-19 ಲಸಿಕೆ ಸಿದ್ದ: ಡೊನಾಲ್ಡ್ ಟ್ರಂಪ್ ವಿಶ್ವಾಸ
ಬೇರೆ ದೇಶದ ಸಂಶೋಧಕರು ಔಷಧಿ ಕಂಡುಹಿಡಿದರೆ, ಅವರಿಗೆ ನನ್ನ ಟೋಪಿ ತೆಗೆದು ಧನ್ಯವಾದ ತಿಳಿಸುತ್ತೇನೆ
Team Udayavani, May 4, 2020, 8:23 AM IST
ವಾಷಿಂಗ್ಟನ್: ಈ ವರ್ಷದ ಅಂತ್ಯದ ವೇಳೆಗೆ ಅಮೆರಿಕಾದಲ್ಲಿ ಕೋವಿಡ್ -19 ಲಸಿಕೆ ಸಿದ್ದವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಶದ ನುಡಿಗಳನ್ನಾಡಿದ್ದಾರೆ.
ಫಾಕ್ಸ್ ನ್ಯೂಸ್ ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ವರ್ಷದ ಕೊನೆಯಲ್ಲಿ ಕೋವಿಡ್ 19 ನಿರ್ಮೂಲನಾ ಲಸಿಕೆಯನ್ನು ಪಡೆಯಲಿದ್ದೇವೆ. ಇದರಲ್ಲಿ ನಮಗೆ ತುಂಬಾ ವಿಶ್ವಾಸವಿದೆ ಎಂದು ಟ್ರಂಪ್ ಹೇಳಿದರು.
ಸೆಪ್ಟೆಂಬರ್‌ನಲ್ಲಿ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳನ್ನು ಪುನಃ ತೆರೆಯಲು ಪ್ರಯತ್ನಿಸಲಾಗುವುದು. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹಿಂತಿರುಗಬೇಕೆಂದು ನಾನು ಬಯಸುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಅಮೆರಿಕಾದ ಸಂಶೋಧಕರು ಈಗಾಗಲೇ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದಾರೆ. ಒಂದು ವೇಳೆ ಬೇರೆ ದೇಶದ ಸಂಶೋಧಕರು ಔಷಧಿ ಕಂಡುಹಿಡಿದರೆ ನಮಗೂ ಸಂತೋಷವಾಗಲಿದ್ದು, ಅವರಿಗೆ ನನ್ನ ಟೋಪಿ (HAT) ತೆಗೆದು ಧನ್ಯವಾದ ತಿಳಿಸುತ್ತೇನೆ. . ಇಂತಹ ಸಂದರ್ಭದಲ್ಲಿ ಲಸಿಕೆ ಕಂಡುಹಿಡಿಯುವುದೊಂದೆ ನಮ್ಮ ಧ್ಯೇಯ ಎಂದರು.
ಅಮೆರಿಕಾದಲ್ಲಿ ಈಗಾಗಲೇ ಕೋವಿಡ್ 19 ವೈರಸ್ ಗೆ 68 ಸಾವಿರಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದು, 11 ಲಕ್ಷಕ್ಕಿಂತಲೂ ಹೆಚ್ಚು ಜನರು ಸೋಂಕಿನಿಂದ ಬಳಲುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.