ಲಂಡನ್‌ನಲ್ಲಿ ಲಸಿಕೆ ಪ್ರಯೋಗ
Team Udayavani, Oct 27, 2020, 12:52 AM IST
ಸಾಂದರ್ಭಿಕ ಚಿತ್ರ
ಲಂಡನ್/ಮುಂಬಯಿ: ಆಕ್ಸ್‌ಫರ್ಡ್ ವಿವಿ ಮತ್ತು ಆಸ್ಟ್ರಾಜೆನೆಕಾ ಜತೆಗೂಡಿ ಅಭಿವೃದ್ಧಿ ಪಡಿಸುತ್ತಿರುವ ಲಸಿಕೆ ಪ್ರಯೋಗಕ್ಕೆ ಸಿದ್ಧರಾಗಿ ರುವಂತೆ ಲಂಡನ್‌ನ ಪ್ರಮುಖ ಆಸ್ಪತ್ರೆ ಯೊಂದಕ್ಕೆ ಸೂಚಿಸಲಾಗಿದೆ. ಕೆಲವೇ ದಿನಗಳಲ್ಲಿ ಈ ಲಸಿಕೆಯ ಮೊದಲ ಬ್ಯಾಚ್ ತಲುಪಲಿದೆ. ನ.2ರಿಂದ ರೋಗಿಗಳ ಮೇಲೆ ಲಸಿಕೆ ಪ್ರಯೋಗಿಸಲು ಆಸ್ಪತ್ರೆ ಸಜ್ಜಾಗಿದೆ ಎಂದು “ದಿ ಸನ್’ ಪತ್ರಿಕೆ ವರದಿ ಮಾಡಿದೆ.
ಕೊರೊನಾ ವಿರುದ್ಧ ಲಸಿಕೆ ಕಂಡುಹಿಡಿ ಯಲು ಜಗತ್ತಿನಾದ್ಯಂತ ಪ್ರಯೋಗಗಳು ನಡೆದಿವೆಯಾದರೂ, ಇಲ್ಲಿಯವರೆಗೂ ಅತಿ ಸಕ್ಷಮ ಲಸಿಕೆಯಾಗಿ ಹೊರಹೊಮ್ಮುವ ಲಕ್ಷಣ ತೋರುತ್ತಿರುವುದು ಆಕ್ಸ್‌ಫರ್ಡ್ ವಿ.ವಿ ಅಭಿವೃದ್ಧಿ ಪಡಿಸುತ್ತಿರುವ “ಎಝಡ್‌ಡಿ1222′ ಎನ್ನುವ ಲಸಿಕೆ. ಆಕ್ಸ್‌ಫರ್ಡ್ ಅಭಿವೃದ್ಧಿಪಡಿ ಸುತ್ತಿರುವ ಲಸಿಕೆ ಸುಮಾರು 1 ವರ್ಷದವರೆಗೆ ಜನರನ್ನು ಕೋವಿಡ್‌ನಿಂದ ದೂರವಿಡಬಲ್ಲದು ಎನ್ನುವ ಭರವಸೆಯಲ್ಲಿದ್ದಾರೆ ಆಸ್ಟ್ರಾಜೆನೆಕಾದ ಸಿಇಒ ಪ್ಯಾಸ್ಕಲ್ ಸೋರಿಯೋಟ್. ಗಮ ನಾರ್ಹ ಸಂಗತಿಯೆಂದರೆ, ಈ ಲಸಿಕೆಯು ವಯೋವೃದ್ಧರಲ್ಲಿ ರೋಗನಿರೋಧಕ ಶಕ್ತಿ ಯನ್ನು ಅತೀವವಾಗಿ ವೃದ್ಧಿಸುತ್ತಿರುವುದು ಕಂಡು ಬರುತ್ತಿದೆ ಎಂದು “ಫೈನ್ಯಾನ್ಶಿಯಲ್ ಟೈಮ್ಸ್’ ಪತ್ರಿಕೆ ವರದಿ ಮಾಡಿದೆ.
ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ನಿಷೇಧ ಹೇರಿದರೆ ಸೋಂಕಿನ ಹರಡುವಿಕೆ ಪ್ರಮಾಣ ಶೇ.24ರಷ್ಟು ತಡೆಯಲು ಸಾಧ್ಯವೆಂದು ಲ್ಯಾನ್ಸೆಟ್ ನಿಯತಕಾಲಿಕದಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.